ದೆಹಲಿ: ದಂಪತಿ, ಮನೆಕೆಲಸದಾಕೆ ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆ, 2 ವರ್ಷದ ಮಗಳು ಸುರಕ್ಷಿತ
ನವದೆಹಲಿ: ಪಶ್ಚಿಮ ದಿಲ್ಲಿಯ ಹರಿ ನಗರದಲ್ಲಿ ದಂಪತಿ ಮತ್ತು ಅವರ ಮನೆಯ ಕೆಲಸದಾಕೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತರನ್ನು 38 ವರ್ಷದ ಸಮೀರ್ ಅಹುಜಾ, ಅವರ ಪತ್ನಿ ಶಾಲು ಮತ್ತು ಅವರ ಮನೆಯ ಕೆಲಸದಾಕೆ ಸಪ್ನಾ ಎಂದು ಗುರುತಿಸಲಾಗಿದೆ. ದಂಪತಿಯ ಎರಡು ವರ್ಷದ ಮಗಳು ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ ಎಂದು ಅವರು ಹೇಳಿದರು.
ಈ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಂದು ಬೆಳಿಗ್ಗೆ ಐದು ಜನರು ಮೋಟಾರ್ ಬೈಕ್‌ನಲ್ಲಿ ಮನೆಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.
ಎನ್‌ಡಿಟಿವಿ ವರದಿ ಮಾಡಿರುವಂತೆ ಇಂದು ಬೆಳಗ್ಗೆ 7.30ರ ಸುಮಾರಿಗೆ ಸಪ್ನಾ ದಂಪತಿಯ ಮನೆಗೆ ತಲುಪಿದ ನಂತರ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಹರಿನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ