ಭಾರತೀಯ ಸೇನೆ
ದೇಶ
ಅವಂತಿಪೋರಾ ಎನ್‌ಕೌಂಟರ್: ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರ ಹತ್ಯೆ!
ಅವಂತಿಪೋರಾದಲ್ಲಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಮುಖ್ತಾರ್ ಭಟ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಎನ್‌ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ.
ಅವಂತಿಪೋರಾ(ಜಮ್ಮು ಮತ್ತು ಕಾಶ್ಮೀರ): ಅನಂತನಾಗ್‌ನ ಬಿಜ್‌ಬೆಹರಾದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದೆ. ಇದೇ ವೇಳೆ, ಅವಂತಿಪೋರಾದಲ್ಲಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಮುಖ್ತಾರ್ ಭಟ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಎನ್‌ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ.
ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎನ್‌ಕೌಂಟರ್ ಗೂ ಮುನ್ನ ಮುಖ್ತಾರ್ ಭಟ್, ವಿದೇಶಿ ಭಯೋತ್ಪಾದಕನೊಂದಿಗೆ ಸೇರಿ ಭದ್ರತಾ ಪಡೆಗಳ ಶಿಬಿರದ ಮೇಲೆ ದಾಳಿ ಮಾಡಲು ಹೊರಟಿದ್ದರು ಎಂದು ಎಡಿಜಿಪಿ ತಿಳಿಸಿದ್ದಾರೆ.
ಮೃತ ಭಯೋತ್ಪಾದಕರಿಂದ ಒಂದು ಎಕೆ-74 ರೈಫಲ್, ಒಂದು ಎಕೆ-56 ರೈಫಲ್ ಮತ್ತು 1 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಇನ್ನು ಅವಂತಿಪೋರಾ ಪೊಲೀಸರು ಮತ್ತು ಸೇನೆಯು ಒಂದು ದೊಡ್ಡ ಭಯೋತ್ಪಾದಕ ಕೃತ್ಯವನ್ನು ತಪ್ಪಿಸಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ