ಖಂಡ್ವಾ: ಮಧ್ಯ ಪ್ರದೇಶದ ಖಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಕಬ್ಬಿನ ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಮಗು ಇಂದೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ತನ್ನ ಸಂಬಂಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವಿವೇಕ್ ಸಿಂಗ್ ತಿಳಿಸಿದ್ದಾರೆ.
ತನಿಖೆಯ ಸಮಯದಲ್ಲಿ, ಪೊಲೀಸರು ಈ ಪ್ರದೇಶದ ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆ ವ್ಯಕ್ತಿ ಭಾನುವಾರ ರಾತ್ರಿ ಸಂತ್ರಸ್ತೆಯ ಕುಟುಂಬವನ್ನು ಮಂಚವನ್ನು ಎರವಲು ಪಡೆಯಲು ಸಂಪರ್ಕಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಚಾರಣೆ ವೇಳೆ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯು ಬಾಲಕಿ ಮಲಗಿದ್ದಾಗ ಆಕೆಯನ್ನು ಅಪಹರಿಸಿ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಗದ್ದೆಗೆ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿದ್ದಾರೆ.
Advertisement