ಕೆಂಪುಕೋಟೆ ದಾಳಿ ಪ್ರಕರಣ: ಉಗ್ರ ಮೊಹಮ್ಮದ್ ಆರಿಫ್ ಗೆ ಗಲ್ಲು ಶಿಕ್ಷೆ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

2000 ಇಸವಿಯಲ್ಲಿ ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ ವಿಧಿಸಲಾಗಿದ್ದ ಗಲ್ಲುಶಿಕ್ಷೆ ತೀರ್ಪನ್ನು ಸುಪ್ರಿಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: 2000 ಇಸವಿಯಲ್ಲಿ ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ ವಿಧಿಸಲಾಗಿದ್ದ ಗಲ್ಲುಶಿಕ್ಷೆ ತೀರ್ಪನ್ನು ಸುಪ್ರಿಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

ಗಲ್ಲು ಶಿಕ್ಷೆ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದ್ದು, ತನ್ನ ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮರುಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ.

ಕೆಂಪುಕೋಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದು, ಇದೀಗ ಈ ಬಗ್ಗೆ ಯಾವುದೇ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಈ ಅಪರಾಧ ಬಗ್ಗೆ ಎಲ್ಲ ಸಾಕ್ಷಿಗಳು ಸಾಬೀತಾಗಿದ್ದು ಮರುಪರಿಶೀಲನೆ ಮಾಡುವ ಅಗತ್ಯವಿಲ್ಲ ಈ ಅರ್ಜಿಯನ್ನು ನಾವು ತಿರಸ್ಕರಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ತಿಳಿಸಿದ್ದಾರೆ.

ಹೀಗಾಗಿ 2000 ಇಸವಿಯಲ್ಲಿ ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ ಗೆ ಗಲ್ಲುಶಿಕ್ಷೆ ಖಾಯಂ ಆದಂತಾಗಿದೆ. ಅಂದಿನ ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿದಂತೆ ಒಟ್ಟು ಮೂವರು ಸಾವನ್ನಪ್ಪಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com