
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಪುತ್ರ ಹಾಗೂ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಶಾಸಕ ಅಬ್ಬಾಸ್ ಅನ್ಸಾರಿ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ 30 ವರ್ಷದ ಅಬ್ಬಾಸ್ ಅನ್ಸಾರಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅವರ ತಂದೆ ಮತ್ತು ಕುಟುಂಬದ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ತಿಂಗಳು ಇಡಿ ಮುಖ್ತಾರ್ ಅನ್ಸಾರಿ ಅವರ 1.48 ಕೋಟಿ ರೂಪಾಯಿ ಮೌಲ್ಯದ (ನೋಂದಣಿ ಮೌಲ್ಯ) ಏಳು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿತ್ತು.
ಐದು ಬಾರಿ ಮಾಜಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿ ಪ್ರಸ್ತುತ ಉತ್ತರ ಪ್ರದೇಶದ ಬಂದಾ ಜೈಲಿನಲ್ಲಿದ್ದಾರೆ. ಕಳೆದ ವರ್ಷ ಈ ಪ್ರಕರಣದಲ್ಲಿ 59 ವರ್ಷದ ಮುಖ್ತಾರ್ ಅನ್ಸಾರಿಯನ್ನು ಇಡಿ ವಿಚಾರಣೆ ನಡೆಸಿತ್ತು.
Advertisement