ಶಾಕಿಂಗ್ ವಿಡಿಯೋ: ಬೀದಿ ಕಾಮಣ್ಣರ ಹಾವಳಿ; ಪುತ್ರಿ ಕರೆದೊಯ್ಯಲು ಕಾಲೇಜಿಗೆ ಬಂದಿದ್ದ ತಂದೆ ಮೇಲೆ ಸಾಮೂಹಿಕ ಹಲ್ಲೆ!

ಬೀದಿ ಕಾಮಣ್ಣರ ಹಾವಳಿಗೆ ತಮಿಳುನಾಡು ಬೇಸ್ತು ಬಿದ್ದಿದ್ದು, ಪುತ್ರಿ ಕರೆದೊಯ್ಯಲು ಕಾಲೇಜಿಗೆ ಬಂದಿದ್ದ ತಂದೆ ಮೇಲೆ ದುಷ್ಕರ್ಮಿಗಳ ತಂಡ ಸಾಮೂಹಿಕವಾಗಿ ಹಲ್ಲೆ ಮಾಡಿರುವ ಶಾಕಿಂಗ್ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.
ವಿದ್ಯಾರ್ಥಿನಿಯರಿಗೆ ಪುಂಡರ ಕಿರುಕುಳ
ವಿದ್ಯಾರ್ಥಿನಿಯರಿಗೆ ಪುಂಡರ ಕಿರುಕುಳ

ಮಧುರೈ: ಬೀದಿ ಕಾಮಣ್ಣರ ಹಾವಳಿಗೆ ತಮಿಳುನಾಡು ಬೇಸ್ತು ಬಿದ್ದಿದ್ದು, ಪುತ್ರಿ ಕರೆದೊಯ್ಯಲು ಕಾಲೇಜಿಗೆ ಬಂದಿದ್ದ ತಂದೆ ಮೇಲೆ ದುಷ್ಕರ್ಮಿಗಳ ತಂಡ ಸಾಮೂಹಿಕವಾಗಿ ಹಲ್ಲೆ ಮಾಡಿರುವ ಶಾಕಿಂಗ್ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

ಕಾಲೇಜಿಗೆ ಹೋದ ಮಗಳನ್ನು ಕರೆದುಕೊಂಡು ಹೋಗಲು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಭಯಾನಕ ಘಟನೆ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದೆ. ತಮ್ಮ ಮಗಳನ್ನು ಕರೆದುಕೊಂಡು ಹೋಗಲು ಕಾಲೇಜಿಗೆ ಬಂದಿದ್ದ ಪಿ.ಸೆಂಥಮಿಲ್​ ಪಂಡಿಯನ್​ ಎಂಬ 50 ವರ್ಷದ ವ್ಯಕ್ತಿಯ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿದ್ದು, ಪುಂಡರು ಹಿರಿಯ ವ್ಯಕ್ತಿ ಮೇಲೆ ಹೆಲ್ಮೆಟ್ ನಿಂದ ದಾಳಿ ಮಾಡಿದ್ದಾರೆ. ಅಲ್ಲದೆ ನೆಲ್ಲಕ್ಕುರುಳಿಸಿ ಮನಸೋ ಇಚ್ಛೆ ಥಳಿಸಿದ್ದಾರೆ. ಘಟನಾ ಪ್ರದೇಶದಲ್ಲಿ ತೀವ್ರ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕಾಲೇಜು ಆವರಣದಲ್ಲಿ ಪ್ರತಿನಿತ್ಯವೂ ಪುಂಡರ ಗುಂಪು ಈ ಕಾಲೇಜಿಗೆ ಬಂದು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ವಿದ್ಯಾರ್ಥಿನಿಗೆ ಕೂಡ ಹೀಗೆಯೇ ಆಗುತ್ತಿರುವ ಹಿನ್ನೆಲೆಯಲ್ಲಿ ಈಕೆಯ ತಂದೆಯೇ ಖುದ್ದು ಬಂದು ಮಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಇದನ್ನು ಸಹಿಸದ ಪುಂಡನೊಬ್ಬ ಹೆಲ್ಮೆಟ್​ನಿಂದ ಹಲ್ಲೆ ಮಾಡಿದ್ದಾನೆ. 

ವಿಡಿಯೋ ವೈರಲ್ ಬಳಿಕ ಎಚ್ಚೆತ್ತ ಪೊಲೀಸರು
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಬೆನ್ನಲ್ಲೇ ಎಚ್ಚೆತ್ತ ಮಧುರೈ ಪೊಲೀಸರು ಕೇಸ್​ ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ತನಿಖೆ ನಡೆಸುತ್ತಿರುವ ಪೊಲೀಸರು ಸದ್ಯ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡುತ್ತಿದ್ದ ಆರು ಮಂದಿಯನ್ನು ಬಂಧಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com