ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ: ಜಾರಕಿಹೊಳಿ ಹೇಳಿಕೆ ಖಂಡಿಸಿದ ಕಾಂಗ್ರೆಸ್

ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ. 
ರಣದೀಪ್ ಸುರ್ಜೆವಾಲಾ
ರಣದೀಪ್ ಸುರ್ಜೆವಾಲಾ

ನವದೆಹಲಿ: ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ. 

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದಾರೆ. ಹಿಂದೂ ಧರ್ಮ ಎಂಬುದು ಜೀವನ ವಿಧಾನವಾಗಿದ್ದು ಕಾಂಗ್ರೆಸ್ ಪ್ರತಿಯೊಂದು ಧರ್ಮವನ್ನು ಗೌರವಿಸಿಕೊಂಡು ರಾಷ್ಟ್ರ ನಿರ್ಮಾಣ ಮಾಡಿದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ. 

ಹಿಂದೂ ಶಬ್ದದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರಾರ್ಹ, ಪಕ್ಷ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸುತ್ತದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com