ದೆಹಲಿ ಅಬಕಾರಿ ನೀತಿ ಪ್ರಕರಣ: ಅರಬಿಂದೋ ಫಾರ್ಮಾ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರಬಿಂದೋ ಫಾರ್ಮಾ ಕಂಪನಿಯ ಇಬ್ಬರು ಉನ್ನತಾಧಿಕಾರಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರಬಿಂದೋ ಫಾರ್ಮಾ ಕಂಪನಿಯ ಇಬ್ಬರು ಉನ್ನತಾಧಿಕಾರಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದೆ.

ಪೆರ್ನೋಡ್ ರಿಕಾರ್ಡ್‌ನ ಬೆನೊಯ್ ಬಾಬು ಮತ್ತು ಅರಬಿಂದೋ ಫಾರ್ಮಾದ ಶರತ್ ರೆಡ್ಡಿ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳ ಅಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಇದೂವರೆಗೆ ಹಲವು ದಾಳಿಗಳನ್ನು ನಡೆಸಿದ್ದು, ಸೆಪ್ಟೆಂಬರ್‌ ತಿಂಗಳಿನಲ್ಲಿ ಮದ್ಯ ತಯಾರಿಕಾ ಕಂಪನಿ ಇಂಡೋಸ್ಪಿರಿಟ್‌ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧನಕ್ಕೊಳಪಡಿಸಿತ್ತು.

ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ದೆಹಲಿ ಲೆಫ್ಟಿನೆಂಟ್ ಜನರಲ್ ಅವರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಅಬಕಾರಿ ಯೋಜನೆ ಪ್ರಕರಣ ತನಿಖೆಗೆ ಬಂದಿದೆ. ಪ್ರಕರಣ ಸಂಬಂಧ ದೆಹಲಿ ಲೆಫ್ಟಿನೆಂಟ್ ಜನರಲ್ ಅವರು 11 ಮಂದಿ ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಇಡಿ ಅಧಿಕಾರಿಗಳು ಈ ತಿಂಗಳ ಆರಂಭದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಪಿಎ ಕಚೇರಿ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು.

ಪ್ರಕರಣ ದಾಖಲಾದ ನಂತರ ಉಪಮುಖ್ಯಮಂತ್ರಿ ಮತ್ತು ದೆಹಲಿ ಸರ್ಕಾರದ ಕೆಲವು ಅಧಿಕಾರಿಗಳ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com