ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ವಾಹನ, ಮೂವರು ಸರ್ಕಾರಿ ಅಧಿಕಾರಿಗಳ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭದರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.

ದೋಡಾ ಜಿಲ್ಲೆಯ ಆರ್ & ಬಿ ಕಾರ್ಯನಿರ್ವಾಹಕ ಇಂಜಿನಿಯರ್, ಎಇಇ ಮತ್ತು ಸೂಪರಿಂಟೆಂಡಿಂಗ್ ಎಂಜಿನಿಯರ್ ರನ್ನು ಹೊತ್ತೊಯ್ಯುತ್ತಿದ್ದ ವಾಹನ -ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ 10.45ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭುವಿಂದರ್ ಕೊತ್ವಾಲ್ ಅವರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಪೂಂಚ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಷಾ, ಉಧಂಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಮಲ್ ಕಿಶೋರ್ ಶರ್ಮಾ ಮತ್ತು ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಅಪಘಾತದಲ್ಲಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಂಜು ಮುಸುಕಿದ ವಾತಾವರಣ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಸ್ಪಷ್ಟವಾಗಿ ಕಾಣದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com