ಮೈನ್ ಪುರಿ ಉಪ ಚುನಾವಣೆ: ಡಿಂಪಲ್ ಯಾದವ್ ನಾಮಪತ್ರ ಸಲ್ಲಿಕೆ

ಮೈನ್ ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಉಪಸ್ಥಿತರಿದ್ದರು. 
ಅಖಿಲೇಶ್ ಯಾದವ್, ಡಿಂಪಲ್ ಯಾದವ್
ಅಖಿಲೇಶ್ ಯಾದವ್, ಡಿಂಪಲ್ ಯಾದವ್

ಲಖನೌ: ಮೈನ್ ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಉಪಸ್ಥಿತರಿದ್ದರು. 

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸಾವಿನಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಅವರ ಮೌಲ್ಯಗಳು ಮತ್ತು ತತ್ವ್ತಾದರ್ಶಗಳಿಗೆ ಇಂದಿನ ನಾಮಪತ್ರವನ್ನು ಸಮರ್ಪಿಸುವುದಾಗಿ ಡಿಂಪಲ್ ಯಾದವ್ ಟ್ವೀಟ್ ನಲ್ಲಿ ಹೇಳಿದ್ದಾರೆ.

ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ, ಕಾಂಗ್ರೆಸ್, ಬಿಎಸ್ ಪಿ ಈವರೆಗೂ ತಮ್ಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕನೂಜ್ ನಲ್ಲಿ ಸ್ಪರ್ಧಿಸಿದ್ದ ಡಿಂಪಲ್ ಯಾದವ್ ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com