ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕಳೆದ ಗುರುವಾರ ಬಾಲಕಿಯನ್ನು ಶಂಕಿತ ಆರೋಪಿ ಪೈಪರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ಕಿಶನ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆಯಡಿ (ಪೊಕ್ಸೊ) ಎಫ್‌ಐಆರ್ ದಾಖಲಿಸಲಾಗಿದೆ.

ಕಿಶನ್‌ನನ್ನು ಬಂಧಿಸಲು ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪಿಪ್ರಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಧೀರೇಂದ್ರ ಯಾದವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com