ಉದಯಪುರ: ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್ ರೈಲು ಹಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರೈಲ್ವೆ ಮತ್ತು ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ನಂತರ ಅವರಿಗೆ ಪರಿಹಾರ ಅಥವಾ ಉದ್ಯೋಗ ನೀಡದ ಕಾರಣ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
"ಬಾಲಾಪರಾಧಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಸ್ಫೋಟಕವನ್ನು ಖರೀದಿಸಿದ ಇನ್ನೊಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ" ಎಂದು ಭಯೋತ್ಪಾದನಾ ನಿಗ್ರಹ ದಳ ಮತ್ತು ವಿಶೇಷ ಕಾರ್ಯಾಚರಣೆ ತಂಡದ ಎಡಿಜಿ ಅಶೋಕ್ ರಾಥೋಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆರೋಪಿಗಳನ್ನು ಧೂಲ್ ಚಂದ್ ಮೀನಾ ಮತ್ತು ಪ್ರಕಾಶ್ ಮೀನಾ ಎಂದು ಗುರುತಿಸಲಾಗಿದೆ. ಅಪ್ರಾಪ್ತನಿಗೆ 17 ವರ್ಷ ಎಂದು ಅವರು ಹೇಳಿದ್ದಾರೆ.
ಕಳೆದ ಭಾನುವಾರ ಅಸರ್ವಾ-ಉದಯಪುರ್ ಎಕ್ಸ್‌ಪ್ರೆಸ್ ರೈಲು ಹಾದುಹೋಗುವ ಕೆಲವೇ ಗಂಟೆಗಳ ಮೊದಲು ಹಳಿ ಸ್ಫೋಟಗೊಂಡಿದ್ದು, ರೈಲನ್ನು ಡುಂಗರ್ ಪುರದಲ್ಲಿ ತಡೆದು ನಿಲ್ಲಿಸಲಾಗಿದೆ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿತ್ತು.
Advertisement