ಕಾಂಗ್ರೆಸ್ ಜೋಡೋ ಯಾತ್ರೆ, ರಾಹುಲ್ ಜೊತೆ ಮಹಾತ್ಮ ಗಾಂಧಿ ಮೊಮ್ಮಗ ತುಷಾರ್ ಗಾಂಧಿ ಹೆಜ್ಜೆ!

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ 12 ನೇ ದಿನಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ತುಷಾರ್ ಗಾಂಧಿ ಕೂಡಾ ಇಂದು ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದಾರೆ.
ರಾಹುಲ್ ಜೊತೆಗೆ ತುಷಾರ್ ಗಾಂಧಿ
ರಾಹುಲ್ ಜೊತೆಗೆ ತುಷಾರ್ ಗಾಂಧಿ
Updated on

ಮುಂಬೈ:  ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ 12 ನೇ ದಿನಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ತುಷಾರ್ ಗಾಂಧಿ ಕೂಡಾ ಇಂದು ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದಾರೆ.

ಈ ಕುರಿತ ಫೋಟೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ದೇಶ ಅಪಾಯವನ್ನು ಎದುರಿಸುತ್ತಿದ್ದಾಗ ಗಾಂಧಿ-ನೆಹರೂ ಯಾವಾಗಲೂ ಒಂದಾಗಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ಹೇಳಿದೆ. 

ಅಕೊಲಾ ಜಿಲ್ಲೆಯ ಬಾಳಾಪುರದ ಜಿಲ್ಲಾ ಪರಿಷತ್ ಶಾಲೆಯಿಂದ ಬೆಳಗ್ಗೆ 6 ಗಂಟೆಗೆ ಯಾತ್ರೆ ಆರಂಭವಾಯಿತು. ಬೆಳಗ್ಗೆ ವಿರಾಮದ ನಂತರ ಶೆಗಾಂವ್  ತಲುಪಲಿದ್ದು, ಅಲ್ಲಿನ ಪ್ರಸಿದ್ಧ ಸಂತ ಗಜಾನನ ಮಹಾರಾಜ ದೇವಾಲಯಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಲಿದ್ದಾರೆ. 

ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದು, ಅವರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುತ್ತಿದ್ದಾರೆ. ಇಂದು ಸಂಜೆ ಶೆಗಾಂವ್ ನಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ವಾರ ನಾಂದೇಡ್ ನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ರಾಹುಲ್ ಮಾತನಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com