ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಕೇರಳವೊಂದರಲ್ಲೇ 15 ಸೇರಿದಂತೆ ದೇಶದಾದ್ಯಂತ 17 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 556 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,68,523 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 556 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,68,523 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 6,782 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 15 ಸೇರಿದಂತೆ ದೇಶದಾದ್ಯಂತ 17 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,570 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸದ್ಯ ಈವರೆಗೆ 4,41,31,171 ಕೋವಿಡ್‌ನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.02ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 1.19ರಷ್ಟಿದೆ.

ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ, 219.85 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com