ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆಯಲ್ಲಿ ನಟ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ ಭಾಗಿ

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಭಾನುವಾರ ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯ ನಟ ಅಮೋಲ್ ಪಾಲೇಕರ್ ಮತ್ತು ಅವರ ಪತ್ನಿ, ಲೇಖಕಿ-ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಗೋಖಲೆ ಅವರು ಭಾಗವಹಿಸಿದ್ದರು.
ಭಾರತ್ ಜೋಡೋ ಯಾತ್ರೆಯಲ್ಲಿ ನಟ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ
ಭಾರತ್ ಜೋಡೋ ಯಾತ್ರೆಯಲ್ಲಿ ನಟ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ
Updated on

ಬುಲ್ದಾನ: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಭಾನುವಾರ ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯ ನಟ ಅಮೋಲ್ ಪಾಲೇಕರ್ ಮತ್ತು ಅವರ ಪತ್ನಿ, ಲೇಖಕಿ-ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಗೋಖಲೆ ಅವರು ಭಾಗವಹಿಸಿದ್ದರು.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆಯ ಕೊನೆಯ ದಿನವಾದ ಇಂದು ತಾರಾ ದಂಪತಿಗಳು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು. ಭಾರತ್ ಜೋಡೋ ಯಾತ್ರೆ ಇಂದು ರಾತ್ರಿ ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ರಾಹುಲ್ ಗಾಂಧಿ ಗಾಂಧಿಯವರೊಂದಿಗೆ ಪಾಲೇಕರ್ ಮತ್ತು ಗೋಖಲೆ ಅವರು ಇರುವ ಚಿತ್ರಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.

"ದೇಶದ ಬಗೆಗಿನ ತಮ್ಮ ಜವಾಬ್ದಾರಿಯನ್ನು ಅರಿತು, ಇಂದು ಖ್ಯಾತ ನಟ ಮತ್ತು ಚಲನಚಿತ್ರ ನಿರ್ದೇಶಕ ಅಮೋಲ್ ಪಾಲೇಕರ್ ಅವರು ಪತ್ನಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು. ದೇಶದ ಜನರ ಪರವಾಗಿ ಧ್ವನಿ ಎತ್ತಿದ್ದಕ್ಕಾಗಿ ಧನ್ಯವಾದಗಳು" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com