ಸಿಎಂ ಏಕನಾಥ್ ಶಿಂಧೆ
ದೇಶ
ಪುಣೆ-ಬೆಂಗಳೂರು ಹೆದ್ದಾರಿ ಅಪಘಾತ ಪ್ರಕರಣ: ತನಿಖೆಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆದೇಶ
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.
ಪುಣೆ (ಮಹಾರಾಷ್ಟ್ರ): ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.
ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ 40ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದವು. ಘಟನೆಯಲ್ಲಿ 38 ಮಂದಿ ಗಾಯಗೊಂಡಿದ್ದರು.
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಏಕನಾಥ್ ಶಿಂಧೆಯವರು, ಅಪಘಾತದ ಮಾಹಿತಿ ತಿಳಿದ ಕೂಡಲೇ, ಘಟನೆಗೆ ನಿಖರವಾದ ಕಾರಣವನ್ನು ಕಂಡುಹಿಡಿಯುವಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸ್ಥಳೀಯ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.


