ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಅರ್ಜಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. 
ಕಾಂಗ್ರೆಸ್ ಸಾಂದರ್ಭಿಕ ಚಿತ್ರ
ಕಾಂಗ್ರೆಸ್ ಸಾಂದರ್ಭಿಕ ಚಿತ್ರ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. 

ಈ ಬಗ್ಗೆ ಕಾಂಗ್ರೆಸ್ ಪಕ್ಷವೇ ಮಾಹಿತಿ ನೀಡಿದ್ದು, ಈ ವಾರದಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಈಗಾಗಲೇ ಕೇಂದ್ರ ಸರ್ಕಾರ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.

ಪ್ರಕರಣದಲ್ಲಿ ತಾನು ಪ್ರತಿವಾದಿಯಾಗಿದ್ದರೂ ತನ್ನ ಅಭಿಪ್ರಾಯ ಆಲಿಸದೆ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಪ್ರತಿಪಾದಿಸಿದ್ದು, ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

ನವೆಂಬರ್ 11 ರಂದು, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಬಿವಿ ನಾಗರತ್ನ ಅವರ ಪೀಠ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಜೀವಾವಧಿ ಶಿಕ್ಷೆ ಅನುಭವಿಸಿದ ಆರು ಅಪರಾಧಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com