ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 406 ಹೊಸ ಕೇಸ್ ಪತ್ತೆ, 12 ಮಂದಿ ಸಾವು

ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 406 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 406 ಹೊಸ ಕೇಸ್ ಪತ್ತೆ, 12 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 406 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,69,421ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,30,586ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,402ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 481 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,32,433ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,92,665 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,40,02,656 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ  2,19,86,38,566 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.