ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಮೂವರ ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಹಳಿ ತಪ್ಪಿದ ಗೂಡ್ಸ್ ರೈಲು.
ಹಳಿ ತಪ್ಪಿದ ಗೂಡ್ಸ್ ರೈಲು.

ಜಾಜ್‌ಪುರ: ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರುಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಇಂದು ಬೆಳಿಗ್ಗೆ ಸುಮಾರು 6.45ಕ್ಕೆ ಯಾತ್ರಿಕರು ಪ್ರಯಾಣಿಕ ರೈಲಿಗಾಗಿ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡೊಂಗೊಪೋಸಿಯಿಂದ ಛತ್ರಪುರಕ್ಕೆ ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಉರುಳಿ ಬಿದ್ದಿದೆ. ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.

ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com