ರಾಂಪುರ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಅಜಂ ಖಾನ್ ಅವರು ತಮ್ಮ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
2019 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಲೋಕ್ ದುಬೆ ಅವರು ಅಕ್ಟೋಬರ್ 27 ರಂದು ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದರು ಮತ್ತು ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದರು.
ಆ ಸಮಯದಲ್ಲಿ ಅಜಂ ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ನಂತರ ನಿಯಮಿತ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಯಿತು ಎಂದು ವಕೀಲರು ಹೇಳಿದ್ದಾರೆ.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಅಜಂ ಖಾನ್ ಅವರಿಗೆ ನಿಯಮಿತ ಜಾಮೀನು ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ.
ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ.
Advertisement