ಗುಜರಾತ್ ಚುನಾವಣೆ: ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ, ಪ್ರಧಾನಿ ವಿರುದ್ಧ ಕಾಂಗ್ರೆಸ್ ಎನ್‌ಸಿಪಿಸಿಆರ್‌ಗೆ ದೂರು

ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಮಂಗಳವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಮಂಗಳವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ  ಗುಜರಾತಿಯಲ್ಲಿ ಬಿಜೆಪಿ ಆಡಳಿತ ಕುರಿತು ಬಾಲಕಿಯೊಬ್ಬಳು ಮಾತನಾಡುತ್ತಿರುವ ವಿಡಿಯೋವನ್ನು ಪ್ರಧಾನಿ ಹಂಚಿಕೊಂಡ ನಂತರ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನೇಟ್ ಅವರು ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಅವರಿಗೆ ದೂರು ಸಲ್ಲಿಸಿದ್ದಾರೆ.

ಗುಜರಾತ್‌ನಲ್ಲಿ ಪಿಎಂ ಮೋದಿ ಚುನಾವಣಾ ಮತ್ತು ರಾಜಕೀಯ ಪ್ರಚಾರಕ್ಕಾಗಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳುವುದರ ವಿರುದ್ಧ ಎನ್‌ಸಿಪಿಸಿಆರ್‌ನ ಪ್ರಿಯಾಂಕ್ ಕಾನೂಂಗೊ ಅವರಿಗೆ ದೂರು ಸಲ್ಲಿಸಿದ್ದೇವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಸುಪ್ರಿಯಾ ತನ್ನ ಟ್ವೀಟರ್ ಖಾತೆಯಲ್ಲಿ ದೂರನ್ನು ಹಂಚಿಕೊಂಡಿದ್ದಾರೆ.

ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಕ್ಕಳ ದುರುಪಯೋಗದ ಮುಕ್ತ ಮತ್ತು ಮುಚ್ಚಿದ ಪ್ರಕರಣವಾಗಿದೆ. ಎನ್ ಸಿಪಿಸಿಆರ್ ಮತ್ತು ಚುನಾವಣಾ ಈಗ ತೀವ್ರ ಪರೀಕ್ಷೆಯಲ್ಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. 

ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು "ಚುನಾವಣೆ ಮತ್ತು ರಾಜಕೀಯ ಪ್ರಚಾರಕ್ಕಾಗಿ ಅಪ್ರಾಪ್ತ ಮಕ್ಕಳನ್ನು ದುರುಪಯೋಗಪಡಿಸಿಕೊಂಡಿದ್ದು, ಆಯೋಗ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಶ್ರೀನೇಟ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com