ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ.

1949 ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ. 2015ಕ್ಕೂ ಮುನ್ನ ಈ ದಿನವನ್ನು ಕಾನೂನು ದಿನವಾಗಿ ಆಚರಿಸಲಾಗುತ್ತಿತ್ತು.

ಕಾರ್ಯಕ್ರಮದ ಭಾಗವಹಿಸುವ ಪ್ರಧಾನಿ ಮೋದಿ, ಇ-ಕೋರ್ಟ್ ಯೋಜನೆಯಡಿಯಲ್ಲಿ ಹೊಸ ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ(ಪಿಎಂಒ) ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿಯವರು ಪ್ರಾರಂಭಿಸುತ್ತಿರುವ ಉಪಕ್ರಮಗಳಲ್ಲಿ 'ವರ್ಚುವಲ್ ಜಸ್ಟೀಸ್ ಕ್ಲಾಕ್', 'ಜಸ್ಟಿಸ್' ಮೊಬೈಲ್ ಅಪ್ಲಿಕೇಶನ್ 2.0, ಡಿಜಿಟಲ್ ಕೋರ್ಟ್ ಮತ್ತು 'ಎಸ್3ವಾಎಸ್' ವೆಬ್‌ಸೈಟ್‌ ಚಾಲನೆ ಸಹ ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com