ಸಚಿನ್ ಪೈಲಟ್
ಸಚಿನ್ ಪೈಲಟ್

ಸಚಿನ್ ಪೈಲಟ್ ಅಗತ್ಯ ನಮಗಿಲ್ಲ, ಅವರು ನಮಗೆ ಬೇಡ: ಅಶೋಕ್‌ ಗೆಹ್ಲೋಟ್ 10 ಕೋಟಿ ರು. ಹಣ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ

ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಸೇರಿದಂತೆ ಬಂಡಾಯ ಶಾಸಕರಿಗೆ ಬಿಜೆಪಿ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂಬ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಅವರ ಹೇಳಿಕೆ ನಿರಾಧಾರ ಎಂದು ರಾಜಸ್ಥಾನ ಬಿಜೆಪಿ ಪ್ರತಿಕ್ರಿಯಿಸಿದೆ.

ಜೈಪುರ: ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಸೇರಿದಂತೆ ಬಂಡಾಯ ಶಾಸಕರಿಗೆ ಬಿಜೆಪಿ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂಬ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಅವರ ಹೇಳಿಕೆ ನಿರಾಧಾರ ಎಂದು ರಾಜಸ್ಥಾನ ಬಿಜೆಪಿ ಪ್ರತಿಕ್ರಿಯಿಸಿದೆ.

2020ರಲ್ಲಿ ಸಚಿನ್‌ ಪೈಲಟ್‌ ನೇತೃತ್ವದ ಕಾಂಗ್ರೆಸ್‌ ಶಾಸಕರ ಗುಂಪು ಪಕ್ಷದ ವಿರುದ್ಧ ಬಂಡಾಯವೆದ್ದು ಗುರುಗ್ರಾಮದ ರೆಸಾರ್ಟ್‌ನಲ್ಲಿ ಸುಮಾರು ಒಂದು ತಿಂಗಳಿಗೂ ಹೆಚ್ಚು ದಿನ ಉಳಿದುಕೊಂಡಿದ್ದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿಯ ಹಿರಿಯ ನಾಯಕರು ಇದ್ದರು ಎಂದು ಗೆಹ್ಲೋಟ್ ಆರೋಪಿಸಿದ್ದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಬಂಡಾಯ ಶಾಸಕರ ಮನೆಗೆ ನಿರಂತರವಾಗಿ ಭೇಟಿ ನೀಡಿದ್ದಾರೆ. ಪೈಲಟ್‌ ಸೇರಿದಂತೆ ಪ್ರತಿಯೊಬ್ಬ ಬಂಡಾಯ ಶಾಸಕನಿಗೂ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂದು ಗೆಹ್ಲೋಟ್ ಹೇಳಿದ್ದರು. ಈ ಆರೋಪವನ್ನು ಅಲ್ಲಗಳೆದಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್‌ ಪೂನಿಯಾ, ಇದು ಆಧಾರರಹಿತ ಆರೋಪ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳಿಗೆ ಹಾಗೂ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ. ಗೆಹ್ಲೋಟ್ ಅವರು ಕಳೆದ ನಾಲ್ಕು ವರ್ಷಗಳಿಂದ ಈ ಆರೋಪವನ್ನು ಮಾಡುತ್ತಲೇ ಬಂದಿದ್ದಾರೆ. ಇದಕ್ಕೆ ಯಾವುದೇ ಆಧಾರವಿಲ್ಲ.  ನಮಗೆ ಸಚಿನ್ ಪೈಲಟ್ ಬೇಡ, ಈ ಪ್ರಸಂಗಗಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಪೂನಿಯಾ ತಿಳಿಸಿದ್ದಾರೆ.

ಸಚಿನ್ ಪೈಲಟ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಇದು ಕಾಂಗ್ರೆಸ್‌ನ ಆಂತರಿಕ ಕಲಹ. ನಡೆಯುತ್ತಿರುವ ಜಗಳಕ್ಕೆ ನಾವು ಹೇಗೆ ಹೊಣೆಗಾರರು? ಗೆಹ್ಲೋಟ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಾವು ಪೈಲಟ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ. ನಮಗೆ ಹಿಂದೆಯೂ ಪೈಲಟ್ ಅಗತ್ಯವಿರಲಿಲ್ಲ ಮತ್ತು ಈಗಲೂ ನಮಗೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com