'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!

ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಬಾಬಾ ರಾಮದೇವ್ (ಎಎನ್ಐ ಚಿತ್ರ)
ಬಾಬಾ ರಾಮದೇವ್ (ಎಎನ್ಐ ಚಿತ್ರ)
Updated on

ಮುಂಬೈ: ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಪತಂಜಲಿ (Patanjali) ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಾಬಾ ರಾಮ್‌ದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು. ಬಾಬಾ ರಾಮದೇವ್ ಅವರ ಈ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಇನ್ನು ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ತಮಾಷೆಯಾಗಿ ಮಾತನಾಡಿದ ಬಾಬಾ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದಾರೆ.

ರಾಮ್ ದೇವ್ ಅವರ ಈ ಹೇಳಿಕೆ ಇದೀಗ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು ವ್ಯಾಪಕ ಟ್ರೋಲ್ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com