ಗುಜರಾತ್ ಚುನಾವಣೆ: ಬಿಜೆಪಿ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ

ಈ ತಿಂಗಳ ಆರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಗುಜರಾತ್‌ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಅವರು ಸೋಮವಾರ ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಜಯನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ
ಜಯನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ

ಅಹಮದಾಬಾದ್: ಈ ತಿಂಗಳ ಆರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಗುಜರಾತ್‌ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಅವರು ಸೋಮವಾರ ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 75 ವರ್ಷದ ವ್ಯಾಸ್ ಅವರನ್ನು ಅಹಮದಾಬಾದ್‌ನಲ್ಲಿ ಪಕ್ಷಕ್ಕೆ ಬರಮಾಡಿಕೊಂಡರು.

ರಾಜಸ್ಥಾನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಕೂಡ ವ್ಯಾಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವ್ಯಾಸ್, ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸಿದರು.

ಜಯನಾರಾಯಣ ಅವರ ಜೊತೆ ಅವರ ಮಗ ಸಮೀರ್ ವ್ಯಾಸ್ ಕೂಡ ಕಾಂಗ್ರೆಸ್ ಸೇರಿದರು.

ನವೆಂಬರ್ 5 ರಂದು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವ್ಯಾಸ್ ಬಿಜೆಪಿಗೆ ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com