ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್ ಮೇಲೆ ದಾಳಿ

ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ.
ಪೊಲೀಸ್​​ ವ್ಯಾನ್ ಮೇಲೆ ದಾಳಿ
ಪೊಲೀಸ್​​ ವ್ಯಾನ್ ಮೇಲೆ ದಾಳಿ
Updated on

ನವದೆಹಲಿ: ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ.

ಇಂದು ಸಂಜೆ ಪೋಲಿಗ್ರಾಫ್ ಪರೀಕ್ಷೆಯ ನಂತರ ಪೂನಾವಾಲಾನನ್ನು ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಕತ್ತಿಗಳನ್ನು ಹಿಡಿದಿದ್ದ ಕನಿಷ್ಠ ಇಬ್ಬರು ವ್ಯಕ್ತಿಗಳು ಪೊಲೀಸ್ ವ್ಯಾನ್ ಮೇಲೆ ದಾಳಿ ಮಾಡಿದ್ದಾರೆ.

ಎಫ್‌ಎಸ್‌ಎಲ್ ಕಟ್ಟಡದ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದ ಇಬ್ಬರು ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿಕೋರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com