ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಗೆ ಡಿಸೆಂಬರ್ 1 ರಂದು ನಾರ್ಕೋ ಪರೀಕ್ಷೆ

ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಬರ್ಬರ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಡಿಸೆಂಬರ್ 1 ರಂದು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಾರ್ಕೋ ಪರೀಕ್ಷೆ ನಡೆಸಲು ದೆಹಲಿ...
ಪೊಲೀಸರ ವಶದಲ್ಲಿರುವ ಅಫ್ತಾಬ್
ಪೊಲೀಸರ ವಶದಲ್ಲಿರುವ ಅಫ್ತಾಬ್
Updated on

ನವದೆಹಲಿ: ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಬರ್ಬರ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಡಿಸೆಂಬರ್ 1 ರಂದು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಾರ್ಕೋ ಪರೀಕ್ಷೆ ನಡೆಸಲು ದೆಹಲಿ ಕೋರ್ಟ್ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.
  
ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಪೂನಾವಾಲಾನನ್ನು ರೋಹಿಣಿಯಲ್ಲಿರುವ ಎಫ್‌ಎಸ್‌ಎಲ್ ಗೆ ಕರೆದೊಯ್ಯಲು ಅನುಮತಿ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅದಕ್ಕೆ ಅನುಮತಿ ನೀಡಿದೆ ಎಂದು ಪೂನಾವಾಲಾ ಪರ ವಕೀಲ ಅಬಿನಾಶ್ ಕುಮಾರ್ ಹೇಳಿದ್ದಾರೆ.

ಆರೋಪಿಯನ್ನು ಈಗಾಗಲೇ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನೂ ಉತ್ತರಸಿಗದ ಕೆಲವು ಪ್ರಶ್ನೆಗಳಿಗೆ ಉತ್ತರ ಪಡೆಯಲು ಪೂನಾವಾಲಾನನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

28 ವರ್ಷದ ಪೂನಾವಾಲಾ ತನ್ನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದನು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com