ಮಗ ವೇಗವಾಗಿ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಹೃದಯಾಘಾತವಾಗಿ ತಂದೆ ಸಾವು!

ಗ್ರೇಟರ್ ನೋಯ್ಡಾದ ರಾಷ್ಟ್ರೀಯ ಹೆದ್ದಾರಿ 91ರಲ್ಲಿ ವೇಗವಾಗಿ ಬಂದ ಮಾರುತಿ ಬ್ರಿಝಾ ಕಾರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದ ದಶ್ಯ
ಅಪಘಾತದ ದಶ್ಯ

ನವದೆಹಲಿ: ಗ್ರೇಟರ್ ನೋಯ್ಡಾದ ರಾಷ್ಟ್ರೀಯ ಹೆದ್ದಾರಿ 91ರಲ್ಲಿ ವೇಗವಾಗಿ ಬಂದ ಮಾರುತಿ ಬ್ರಿಝಾ ಕಾರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನಡೆದಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇನ್ನು ಕಾರು ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗಳಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 91ರ ಕೋಟ್ ಗ್ರಾಮದ ಬಳಿ ವೇಗವಾಗಿ ಬಂದ ಬ್ರಿಝಾ ಕಾರು ಪಲ್ಟಿಯಾಗಿದೆ. ನೋಯ್ಡಾದ ಬಹಲೋಲ್ಪುರ್ ಗ್ರಾಮದ ನಿವಾಸಿ ಪ್ರದೀಪ್, ಅವರ ತಂದೆ ಭೂಪ್ ಸಿಂಗ್, ಅವರ ಪತ್ನಿ ಮತ್ತು 9 ವರ್ಷದ ಬಾಲಕಿ ಬ್ರೆಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಕಾರು ಪಲ್ಟಿಯಾಗಿದ್ದನ್ನು ಕಂಡ ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೃದಯಾಘಾತವಾಗಿ ತೀವ್ರ ಅಸ್ವಸ್ಥರಾಗಿದ್ದ 58 ವರ್ಷದ ಭೂಪ್ ಸಿಂಗ್ ಮೃತಪಟ್ಟಿದ್ದಾರೆ.

ನೋಯ್ಡಾದ ಬಹಲೋಲ್‌ಪುರ ನಿವಾಸಿ ಪ್ರದೀಪ್ ಸಿಂಗ್, ಪಚೋಟಾ ದೇವಸ್ಥಾನದಲ್ಲಿ ನೈವೇದ್ಯ ಅರ್ಪಿಸಿ ಕುಟುಂಬ ಸಮೇತ ನೋಯ್ಡಾಗೆ ತೆರಳುತ್ತಿದ್ದರು ಎಂದು ದಾದ್ರಿ ಪೊಲೀಸ್ ಠಾಣೆ ಪ್ರಭಾರಿ ಉಮೇಶ್ ಬಹದ್ದೂರ್ ಸಿಂಗ್ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com