ಒಂದು ವರ್ಷದಲ್ಲಿ ಕಾಂಗ್ರೆಸ್‌‌ಗೆ 95.46 ಕೋಟಿ ರೂ. ದೇಣಿಗೆ; ಆರು ಪಟ್ಟು ಅಧಿಕ ಬಿಜೆಪಿಗೆ, ಆಮ್ ಆದ್ಮಿ ಪಕ್ಷಕ್ಕೆಷ್ಟು?

2021–22ರ ಅವಧಿಯಲ್ಲಿ ಆಡಳಿತಾರೂಢ ಬಿಜೆ‍ಪಿ ಪಕ್ಷವು ಬರೋಬ್ಬರಿ ರೂ. 614.53 ಕೋಟಿ ದೇಣಿಗೆಯನ್ನು ಸ್ವೀಕರಿಸಿದೆ. ಇದು ಪ್ರತಿಪಕ್ಷ ಕಾಂಗ್ರೆಸ್ ಗಳಿಸಿದ ದೇಣಿಗೆಗಿಂತ ಆರು ಪಟ್ಟು ಹೆಚ್ಚು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬಿಜೆಪಿ-ಕಾಂಗ್ರೆಸ್
ಬಿಜೆಪಿ-ಕಾಂಗ್ರೆಸ್
Updated on

ನವದೆಹಲಿ: 2021–22ರ ಅವಧಿಯಲ್ಲಿ ಆಡಳಿತಾರೂಢ ಬಿಜೆ‍ಪಿ ಪಕ್ಷವು ಬರೋಬ್ಬರಿ ರೂ. 614.53 ಕೋಟಿ ದೇಣಿಗೆಯನ್ನು ಸ್ವೀಕರಿಸಿದೆ. ಇದು ಪ್ರತಿಪಕ್ಷ ಕಾಂಗ್ರೆಸ್ ಗಳಿಸಿದ ದೇಣಿಗೆಗಿಂತ ಆರು ಪಟ್ಟು ಹೆಚ್ಚು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ರೂ. 95.46 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಅವಧಿಯಲ್ಲಿ 43 ಲಕ್ಷ ರೂ.ಗಳನ್ನು ದೇಣಿಗೆಯಾಗಿ ಸ್ವೀಕರಿಸಿದ್ದರೆ, ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ-ಎಂ 10.05 ಕೋಟಿ ರೂಪಾಯಿಗಳನ್ನು ಪಡೆದಿದೆ.

ಈ ನಾಲ್ಕು ರಾಷ್ಟ್ರೀಯ ಪಕ್ಷಗಳು ತಮ್ಮ ಆದಾಯದ ಬಗ್ಗೆ ಇತ್ತೀಚೆಗಷ್ಟೇ ಚುನಾವಣಾ ಆಯೋಗಕ್ಕೆ ವರದಿಗಳನ್ನು ನೀಡಿದ್ದವು. ಆಯೋಗ ಮಂಗಳವಾರ ಈ ದಾಖಲೆಗಳನ್ನು ಸಾರ್ವಜನಿಕಗೊಳಿಸಿದೆ.

ಜನಪ್ರಾತಿನಿಧ್ಯ ಕಾಯ್ದೆಯ ಪ್ರಕಾರ, ರಾಜಕೀಯ ಪಕ್ಷಗಳಿಗೆ ಯಾವುದೇ ವ್ಯಕ್ತಿಗಳು ನಗದು ರೂಪದಲ್ಲಿ ನೀಡುವ ದೇಣಿಗೆಯ ಮೊತ್ತವು ರೂ.20 ಸಾವಿರಕ್ಕಿಂತ ಕಡಿಮೆ ಇದ್ದರೆ, ಅವರ ಹೆಸರನ್ನು ಪಕ್ಷಗಳು ಬಹಿರಂಗಪಡಿಸಬೇಕಿಲ್ಲ. ಒಂದು ವೇಳೆ 20 ಸಾವಿರಕ್ಕಿಂತ ಮೇಲ್ಪಟ್ಟ ಮೊತ್ತದ ದೇಣಿಗೆಯ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವ ದೇಣಿಗೆ ವರದಿಯಲ್ಲಿ ಉಲ್ಲೇಖಿಸಬೇಕಾಗುತ್ತದೆ.

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಸೇರಿದಂತೆ ಇತರೆ ಚುನಾವಣಾ ಟ್ರಸ್ಟ್‌ಗಳು ಬಿಜೆಪಿ ನಿಧಿಗೆ ಪ್ರಮುಖ ಕೊಡುಗೆ ನೀಡಿವೆ.

ದೆಹಲಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಮತ್ತು ಮೂರು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರುವ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು 2021-22ರ ಆರ್ಥಿಕ ವರ್ಷದಲ್ಲಿ 44.54 ಕೋಟಿ ರೂಪಾಯಿಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗಕ್ಕೆ ವರದಿ ನೀಡಿದೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಆಯೋಗಕ್ಕೆ ಸಲ್ಲಿಸಿದ ಇತ್ತೀಚಿನ ಲೆಕ್ಕಪರಿಶೋಧನಾ ವರದಿಯಲ್ಲಿ 30.30 ಕೋಟಿ ರೂಪಾಯಿ ವೆಚ್ಚವನ್ನು ತೋರಿಸಿದೆ. ದೆಹಲಿ ಮತ್ತು ಪಂಜಾಬ್ ಅಲ್ಲದೆ, ಗೋವಾದಲ್ಲಿ ಎಎಪಿ ರಾಜ್ಯದ ಮಾನ್ಯತೆ ಪಡೆದ ಪಕ್ಷವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com