ದೆಹಲಿ ಅಬಕಾರಿ ನೀತಿ ಪ್ರಕರಣ: Buddy ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಬಂಧನ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಅವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಅವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧನಕ್ಕೊಳಗಾಗಿರುವ ಅಮಿತ್ ಅರೋರಾ, ಗುರುಗ್ರಾಮದ Buddy ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆಂದು ತಿಳಿದುಬಂದಿದೆ. ಅರೋರಾ ಬಂಧನದೊಂದಿಗೆ ಇ.ಡಿ ಅಧಿಕಾರಿಗಳು ಪ್ರಕರಣ ಸಂಬಂಧ ಈ ವರೆಗೂ 6 ಮಂದಿಯನ್ನು ಬಂಧನಕ್ಕೊಳಪಡಿಸಿದಂತಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯ ವಿವಿಧ ಸೆಕ್ಷನ್‌ಗಳಡಿ ಕಳೆದ ರಾತ್ರಿ ಅರೋರಾ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ.

ಸಿಬಿಐ ಎಫ್‌ಐಆರ್ ಆಧರಿಸಿ ಇ.ಡಿ ದೇಶದ ವಿವಿಧೆಡೆ ದಾಳಿಗಳನ್ನು ಸಂಘಟಿಸಿತ್ತು. ಈ ಕುರಿತಂತೆ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದ ಸಿಬಿಐ, ಅಮಿತ್ ಅರೋರಾ ಮತ್ತು ಆತನ ಸಂಗಡಿಗರಾದ ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆಯನ್ನು ಆರೋಪಿಗಳೆಂದು ಹೇಳಿತ್ತು. ಈ ಮೂವರೂ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತರು ಎಂದೂ ಸಿಬಿಐ ಆರೋಪಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com