ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನ (Congress president poll )ಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಬ್ಬ ನಾಯಕ-ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ತಿಂಗಳ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆಯವರ ಗೆಲುವು ಬಹುತೇಕವಾಗಿದೆ. ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸ್ಪರ್ಧಿಯಾಗಿ ಕೇರಳದ ಸಂಸದ ಶಶಿ ತರೂರು ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com