ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜಸ್ಥಾನ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ರಾಜಸ್ಥಾನದ ಕೋಟಾದಲ್ಲಿ ಎರಡು ವರ್ಷಗಳ ಹಿಂದೆ ತನ್ನ ಜಮೀನುದಾರನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ 34 ವರ್ಷದ ವ್ಯಕ್ತಿಗೆ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
Published on

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಎರಡು ವರ್ಷಗಳ ಹಿಂದೆ ತನ್ನ ಜಮೀನುದಾರನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ 34 ವರ್ಷದ ವ್ಯಕ್ತಿಗೆ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶ ದೀಪಕ್ ದುಬೆ ಅವರು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಗೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ನೇಪು ಅಲಿಯಾಸ್ ಸಾಜಿದ್(34) ಅಪರಾಧಿ ಎಂದು ಘೋಷಿಸಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಲಲಿತ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಪೋಕ್ಸೊ ನ್ಯಾಯಾಲಯವು ಅಪರಾಧಿಗೆ 85000 ರೂಪಾಯಿ ದಂಡ ವಿಧಿಸಿದೆ ಎಂದು ಅವರು ಹೇಳಿದ್ದಾರೆ. 
ಅಪರಾಧಿ ಸಾಜಿದ್ ಪತ್ನಿ ಮೃತಪಟ್ಟಿದ್ದು, ಆತ ತನ್ನ ನಾಲ್ಕು ವರ್ಷದ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈ ವೇಳೆ ಜಮೀನುದಾರನ ಅಪ್ರಾಪ್ತ ಮಗಳು, ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸಾಜಿದ್ ಮಗನೊಂದಿಗೆ ಆಟವಾಡಲು ಆತನ ಕೋಣೆಗೆ ಆಗಾಗ್ಗೆ ಬರುತ್ತಿದ್ದಳು ಎಂದು ಶರ್ಮಾ ತಿಳಿಸಿದ್ದಾರೆ.

ಅಪರಾಧಿಯು ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಇಂದೋರ್‌ಗೆ ಕರೆದೊಯ್ದು ಅಲ್ಲಿ ಎರಡು ದಿನಗಳ ಕಾಲ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಬಾಲಕಿಯ ತಾಯಿ ಆಗಸ್ಟ್ 17, 2020 ರಂದು ದೂರು ದಾಖಲಿಸಿದ ನಂತರ ಪೊಲೀಸರು ಅಪ್ರಾಪ್ತ ಬಾಲಕಿಯನ್ನು ಇಂದೋರ್‌ನಲ್ಲಿ ರಕ್ಷಿಸಿದ್ದರು.

ಬಾಲಕಿಯ ಹೇಳಿಕೆಯನ್ನು ಆಧರಿಸಿ, ಪೊಲೀಸರು ಆರೋಪಿಯ ವಿರುದ್ಧ ಎಫ್‌ಐಆರ್‌ನಲ್ಲಿ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿದ್ದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com