ಗುಜರಾತ್‌ ನಲ್ಲಿ ಭೀಕರ ರಸ್ತೆ ಅಪಘಾತ: ತ್ರಿಚಕ್ರ ವಾಹನಕ್ಕೆ ಕಂಟೈನರ್‌ ಡಿಕ್ಕಿ ಹೊಡೆದು 10 ಸಾವು, 7 ಮಂದಿಗೆ ಗಾಯ

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ವಡೋದರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಡೋದರ: ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ವಡೋದರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ. ಕಂಟೈನರ್‌ ಟ್ರಕ್‌ ಮೇಲೆ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕವನ್ನು ಹಾರಿದ ಕಂಟೈನರ್‌ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ತ್ರಿಚಕ್ರ ವಾಹನಕ್ಕೆ ಗುದ್ದಿದೆ. ಪರಿಣಾಮ ತ್ರಿಚಕ್ರ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.

ದುರ್ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ  ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ  ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ  ಮತ್ತು  ರಾಜ್ಯ ಸರ್ಕಾರದಿಂದ ತಲಾ 4 ಲಕ್ಷ ರು. ಹಾಗೂ ಗಾಯಾಳುಗಳಿಗೆ ತಲಾ 50,000 ರು. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com