ತವಾಂಗ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ದುರ್ಮರಣ ಹೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಇಂದು ನಡೆದಿದೆ.
ತವಾಂಗ್ ಬಳಿ ಬೆಳಗ್ಗೆ 10-30 ರ ಸುಮಾರಿಲ್ಲಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಮತ್ತೋರ್ವ ಪೈಲಟ್ ಗೆ ವೈದ್ಯಕೀಯ ಚಿಕಿತ್ಸೆ ಮುಂದುವರೆದಿದೆ. ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಅವರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
Advertisement