ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಸೇರಿದಂತೆ ದೇಶದಲ್ಲಿ 17 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5,28,733ಕ್ಕೆ ಏರಿಕೆಯಾಗಿದೆ.
ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,40,39,883ಕ್ಕೆ ಏರಿಕೆಯಾಗಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ. 98.74ಕ್ಕೆ ಏರಿಕೆಯಾಗಿದ್ದು, ದೈನಂದಿನ ಮತ್ತು ವಾರದ ಪಾಸಿಟಿವಿಟಿ ದರ ಶೇ. 1.32 ರಷ್ಟಿತ್ತು.
Advertisement