ಮನಿ ಲಾಂಡರಿಂಗ್ ಪ್ರಕರಣ: ಅಮ್ನೆಸ್ಟಿ ಇಂಡಿಯಾದ 1.54 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ಮನಿ ಲಾಂಡರಿಂಗ್ ಅಥವಾ ಹವಾಲಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ವಿರುದ್ಧ ಜಾರಿ ನಿರ್ದೇಶನಾಲಯ ಬಹು ದೊಡ್ಡ ಕ್ರಮ ಕೈಗೊಂಡಿದ್ದು, ಸಂಸ್ಥೆಯ 1.54 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಇಡಿ (ಸಂಗ್ರಹ ಚಿತ್ರ)
ಇಡಿ (ಸಂಗ್ರಹ ಚಿತ್ರ)
Updated on

ನವದೆಹಲಿ: ಮನಿ ಲಾಂಡರಿಂಗ್ ಅಥವಾ ಹವಾಲಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ವಿರುದ್ಧ ಜಾರಿ ನಿರ್ದೇಶನಾಲಯ ಬಹು ದೊಡ್ಡ ಕ್ರಮ ಕೈಗೊಂಡಿದ್ದು, ಸಂಸ್ಥೆಯ 1.54 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

2011-12ರಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಬ್ರಿಟನ್ ನಿಂದ ವಿದೇಶಿ ದೇಣಿಗೆಗಳನ್ನು ಸ್ವೀಕರಿಸಲು ಎಫ್‌ಸಿಆರ್‌ಎ ಅಡಿಯಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾ ಫೌಂಡೇಶನ್ ಟ್ರಸ್ಟ್‌ಗೆ ಅನುಮತಿ ನೀಡಲಾಗಿದೆ ಎಂದು ಇಡಿ ಹೇಳಿದೆ. ಆದರೆ ನಂತರ ಅನುಮತಿಯನ್ನು ರದ್ದುಗೊಳಿಸಲಾಗಿತ್ತು. ಇದರ ನಂತರ ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ. ಲಿಮಿಟೆಡ್ (AIIPL) ಮತ್ತು IAIT ಅನ್ನು 2012-13 ರಲ್ಲಿ ಸ್ಥಾಪಿಸಲಾಗಿತ್ತು. EpCRA ಅನ್ನು ತಪ್ಪಿಸಲು ಈ ಎರಡೂ ಸಂಸ್ಥೆಗಳನ್ನು ಹುಟ್ಟುಹಾಕಲಾಗಿತ್ತು ಎಂದು ಇಡಿ ಆರೋಪಿಸಿದೆ.

ಈ ಎರಡು ಸಂಸ್ಥೆಗಳಲ್ಲಿ ವಿದೇಶಿ ನೇರ ಹೂಡಿಕೆ ಮತ್ತು ಸೇವಾ ರಫ್ತು ಹೆಸರಿನಲ್ಲಿ ಸಂಗ್ರಹವಾದ ಹಣದ ಮೂಲಕ, ಆಮ್ನೆಸ್ಟಿಗೆ ಸಂಬಂಧಿಸಿದ ಸಂಸ್ಥೆಗಳು ಎನ್‌ಜಿಒಗಳಾಗಿ ಕೆಲಸ ಮಾಡಲು ಪ್ರಾರಂಭಿಸಿದವು. ಸೇವೆಗಳ ರಫ್ತು ಮತ್ತು ವಿದೇಶಿ ನೇರ ಹೂಡಿಕೆಯ ಹೆಸರಿನಲ್ಲಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಬ್ರಿಟನ್ ನಿಂದ 51.72 ಕೋಟಿ ರೂ.ಗಳನ್ನು ಎಐಐಪಿಎಲ್ ಗೆ ಕಳುಹಿಸಿದೆ. ಆದಾಗ್ಯೂ, ಸೇವೆಯ ರಫ್ತಿನ ಯಾವುದೇ ಸಾಕ್ಷಿ ಅಥವಾ ಪುರಾವೆಗಳು ಲಭ್ಯವಾಗಿಲ್ಲ. ಹೀಗಾಗಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಡಿಯಾ ಜೊತೆ ಸಂಬಂಧ ಹೊಂದಿರುವ ಚಾರಿಟಬಲ್ ಟ್ರಸ್ಟ್‌ನ 1.54 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಸ್ತಿಗಳನ್ನು ಜಪ್ತಿ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಇಡಿ ತಿಳಿಸಿದ್ದು,  ಈ ಆಸ್ತಿ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್ನ್ಯಾಷನಲ್ ಟ್ರಸ್ಟ್ (IAIT) ಗೆ ಸೇರಿದ್ದಾಗಿದೆ ಎಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯ ಆರೋಪದ ಮೇಲೆ ಅಮ್ನೆಸ್ಟಿ ಇಂಡಿಯಾ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com