ಮಹಾರಾಷ್ಟ್ರದ ನಾಸಿಕ್ ಬಳಿ ಬಸ್ ಹೊತ್ತಿ ಉರಿದು ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ: ಮುಖ್ಯಮಂತ್ರಿ, ಪ್ರಧಾನಿ ಪರಿಹಾರ ಘೋಷಣೆ

ಮಹಾರಾಷ್ಟ್ರ ರಾಜ್ಯದ ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಹೊತ್ತು ಉರಿದು ಸಜೀವ ದಹನಗೊಂಡು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ.
ಹೊತ್ತಿ ಉರಿದ ಬಸ್ಸು
ಹೊತ್ತಿ ಉರಿದ ಬಸ್ಸು

ನಾಸಿಕ್: ಮಹಾರಾಷ್ಟ್ರ ರಾಜ್ಯದ ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಹೊತ್ತು ಉರಿದು ಸಜೀವ ದಹನಗೊಂಡು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ. ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು 38 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ಬಸ್ಸಿನಲ್ಲಿದ್ದ ಪ್ರಯಾಣಿಕರಾಗಿದ್ದಾರೆ. 

ಖಾಸಗಿ ಬಸ್ಸು ಕಂಟೈನರ್ ಗೆ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹಚ್ಚಿ ಉರಿದು ಕೆನ್ನಾಲಿಗೆಯನ್ನು ಚಾಚಿತು. ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸ್ಲೀಪರ್ ಕೋಚ್ ಖಾಸಗಿ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು. 

ಪ್ರಧಾನ ಮಂತ್ರಿ ಪರಿಹಾರ: ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಜ್ಯ ಸರ್ಕಾರ 5 ಲಕ್ಷ ರೂ.ಪರಿಹಾರ: ನಾಸಿಕ್‌ನಲ್ಲಿ ಇಂದು ನಸುಕಿನ ಜಾವ ನಡೆದ ಘಟನೆ ದುರದೃಷ್ಟಕರವಾಗಿದ್ದು, 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆ. ಆಸ್ಪತ್ರೆಯಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com