ಅಹಮದಾಬಾದ್: ಕರಾವಳಿ ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ರಾಜ್ಯದ ಕರಾವಳಿಯಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಸಿಜಿ ಮತ್ತು ಎಟಿಎಸ್ ಸಿಬ್ಬಂದಿ ಅರಬ್ಬಿ ಸಮುದ್ರದಲ್ಲಿ 50 ಕೆಜಿ ಹೆರಾಯಿನ್ ಹೊಂದಿದ್ದ ಎಐ ಸಕರ್ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದೋಣಿಯಲ್ಲಿ ಆರು ಸಿಬ್ಬಂದಿಗಳಿದ್ದು, ಹೆಚ್ಚಿನ ತನಿಖೆಗಾಗಿ ರಾಜ್ಯದ ಜಖೌ ಬಂದರಿಗೆ ತರಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement