ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಖರ್ಗೆ Vs ತರೂರ್ ಅಧಿಕೃತ, ಅ.17ರಂದು ಮತದಾನ

ಅಕ್ಟೋಬರ್ 17 ರಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಪಕ್ಷದ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಶನಿವಾರ ಘೋಷಿಸಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಬ್ಬರೂ...
ಖರ್ಗೆ Vs ತರೂರ್
ಖರ್ಗೆ Vs ತರೂರ್

ನವದೆಹಲಿ: ಅಕ್ಟೋಬರ್ 17 ರಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಪಕ್ಷದ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಶನಿವಾರ ಘೋಷಿಸಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

2000ರಲ್ಲಿ ಜಿತೇಂದ್ರ ಪ್ರಸಾದ್ ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೀನಾಯ ಸೋಲು ಅನುಭವಿಸಿದಾಗ ಪಕ್ಷದ ಉನ್ನತ ಹುದ್ದೆಗೆ ಕೊನೆಯ ಬಾರಿ ಚುನಾವಣೆ ನಡೆದಿತ್ತು.

ಅಲ್ಲದೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ ನಂತರ, 24 ವರ್ಷಗಳ ನಂತರ ಗಾಂಧಿಯೇತರರು ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ.

"ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಅವು ಮಾನ್ಯವಾಗಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ನಾಮಪತ್ರ ಹಿಂಪಡೆಯುವ ಅವಧಿ ಮುಗಿದಿದೆ ಮತ್ತು ಅವರಲ್ಲಿ ಯಾರೂ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿಲ್ಲ. ಹಾಗಾಗಿ ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ" ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com