ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು,  ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು,  ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,593ಕ್ಕೆ ಕುಸಿದಿದೆ. ನಿನ್ನೆ ದಿನ 29,251 ಸಕ್ರಿಯ ಪ್ರಕರಣಗಳು ದಾಖಲಾಗಿದ್ದವು. ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ 658 ಪ್ರಕರಣಗಳ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟಾರೇ ಮೃತರ ಸಂಖ್ಯೆ 5,28,799ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವ್ ದರ ಶೇ. 1.15 ರಷ್ಟಿದ್ದು, ನಿನ್ನೆ ದಿನ 2,39,546 ಸ್ಯಾಂಪಲ್ ಪರೀಕ್ಷೆ ಮಾಡಲಾಗಿದ್ದು, ಈವರೆಗೂ ಒಟ್ಟಾರೇ 89,69,87,772 ಸ್ಯಾಂಪಲ್ ಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಪರೀಕ್ಷೆ ನಡೆಸಿರುವುದಾಗಿ ಸಚಿವಾಲಯ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com