ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಗುಜರಾತ್ ಚುನಾವಣೆಗೆ ಕಾಂಗ್ರೆಸ್ ಸದ್ದಿಲ್ಲದೆ ಪ್ರಚಾರ; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕೊಟ್ಟ ಸಂದೇಶ ಇದು...

ಗುಜರಾತ್ ವಿಧಾನಸಭೆಗೆ ಕಾಂಗ್ರೆಸ್ ಪಕ್ಷ ಸದ್ದಿಲ್ಲದೇ ಪ್ರಚಾರ ಮಾಡುತ್ತಿದ್ದು, ಅದರ ಅಭಿಯಾನದ ಜಾಡು ಹಿಡಿದ ಪ್ರಧಾನಿ ಮೋದಿ, ಬಿಜೆಪಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.
Published on

ಆನಂದ್: ಗುಜರಾತ್ ವಿಧಾನಸಭೆಗೆ ಕಾಂಗ್ರೆಸ್ ಪಕ್ಷ ಸದ್ದಿಲ್ಲದೇ ಪ್ರಚಾರ ಮಾಡುತ್ತಿದ್ದು, ಅದರ ಅಭಿಯಾನದ ಜಾಡು ಹಿಡಿದ ಪ್ರಧಾನಿ ಮೋದಿ, ಬಿಜೆಪಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

ವಿಪಕ್ಷಗಳ ಷಡ್ಯಂತ್ರಕ್ಕೆ ಪ್ರತಿತಂತ್ರ ಹೆಣೆಯುವುದಕ್ಕಾಗಿ ಆಡಳಿತಾರೂಢ ಬಿಜೆಪಿ ಚುನಾವಣೆ ಕಾರ್ಯತಂತ್ರದಲ್ಲಿ ಕೆಲವೊಂದಷ್ಟು ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಮೋದಿ ಹೇಳಿದ್ದಾರೆ.

"ಚುನಾವಣಾ ಪ್ರಚಾರಕ್ಕಾಗಿ ಗುಜರಾತ್ ಗೆ ಪ್ರಧಾನಿ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಈ ಬಾರಿ ಕಾಂಗ್ರೆಸ್ ಗುಜರಾತ್ ನಲ್ಲಿ ಕಾರ್ಯತಂತ್ರವನ್ನು ಬದಲಾವಣೆ ಮಾಡಿಕೊಂಡಂತೆ ನನಗೆ ತೋರುತ್ತಿದೆ. ಆದ್ದರಿಂದ ನಾನು ನಿಮ್ಮನ್ನು ಎಚ್ಚರಿಸುತ್ತಿದ್ದೇನೆ, ನಾನು ಆಳಕ್ಕಿಳಿದು ನೋಡಿಲ್ಲ, ಆದರೆ ಮೇಲ್ನೋಟಕ್ಕೆ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾವಣೆ ಮಾಡಿಕೊಂಡಂತಿದೆ" ಎಂದು ಮೋದಿ ಆನಂದ್ ಜಿಲ್ಲೆಯ ವಲ್ಲಭ್ ವಿದ್ಯಾನಗರದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಮುಗಿಸುವ ಬಗ್ಗೆ ಭಾಷಣ ಮಾಡಿ ಸದ್ದು ಮಾಡುತ್ತಿತ್ತು, ಆದರೆ 20 ವರ್ಷಗಳಲ್ಲಿ ನಾವು ಕುಗ್ಗಲಿಲ್ಲ. ಆದ್ದರಿಂದ ಈ ಬಾರಿ ಅವರು ಹೊಸತನ್ನು ಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು ಸದ್ದಿಲ್ಲದೇ ಇದ್ದಾರೆ, ನಾವು ಎಚ್ಚರದಿಂದ ಇರಬೇಕು ಎಂದು ಮೋದಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

"ಹೊರಗಡೆ ಸದ್ದಿಲ್ಲದೇ ಇರುವ ಕಾಂಗ್ರೆಸ್ ಗ್ರಾಮೀಣ ಭಾಗಗಳಲ್ಲಿ ತನ್ನ ಹಳೆಯ ತಿರುಚುವಿಕೆ ತಂತ್ರಗಳನ್ನು ಬಳಕೆ ಮಾಡುತ್ತಿದೆ ಆದ್ದರಿಂದ ಗೊಂದಲಕ್ಕೀಡಾಗಬೇಡಿ" ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com