ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮುಲಾಯಂ ಸಿಂಗ್ ಯಾದವ್ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು: ಪ್ರಧಾನಿ ಮೋದಿ ಸಂತಾಪ

ಇಂದು ಸೋಮವಾರ ಬೆಳಗ್ಗೆ ನಿಧನರಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಉತ್ತರ ಪ್ರದೇಶದ ಅವರ ಪೂರ್ವಜ ಗ್ರಾಮವಾದ ಸೈಫೈಯಲ್ಲಿ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರ ಜೊತೆ ಪ್ರಧಾನಿ ಮೋದಿ(ಸಂಗ್ರಹ ಚಿತ್ರ)
ಮುಲಾಯಂ ಸಿಂಗ್ ಯಾದವ್ ಅವರ ಜೊತೆ ಪ್ರಧಾನಿ ಮೋದಿ(ಸಂಗ್ರಹ ಚಿತ್ರ)

ಲಕ್ನೊ: ಇಂದು ಸೋಮವಾರ ಬೆಳಗ್ಗೆ ನಿಧನರಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಉತ್ತರ ಪ್ರದೇಶದ ಅವರ ಪೂರ್ವಜ ಗ್ರಾಮವಾದ ಸೈಫೈಯಲ್ಲಿ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಹಿರಿಯ ರಾಜಕಾರಣಿಯ ನಿಧನಕ್ಕೆ ಉತ್ತರ ಪ್ರದೇಶ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು, ಗಣ್ಯರು ಕಂಬನಿ ಮಿಡಿದಿದ್ದಾರೆ.

ಹಲವು ಫೋಟೋಗಳನ್ನು ಹಾಕಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ಈ ಮಣ್ಣಿನ ನಾಯಕರಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು. ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು.

ಮುಲಾಯಂ ಸಿಂಗ್ ಯಾದವ್ ಅವರು ಉತ್ತರ ಪ್ರದೇಶ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕನಂತೆ ವರ್ತಿಸಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದರು. ಅವರು ಸಂಸದೀಯಪಟುವಾಗಿ ಆಡುತ್ತಿದ್ದ ಮಾತುಗಳು ಒಳನೋಟವುಳ್ಳ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿದ್ದವು.

ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಮುಲಾಯಂ ಸಿಂಗ್ ಯಾದವ್ ಜೀ ಅವರೊಂದಿಗೆ ಅನೇಕ ಸಂವಾದಗಳನ್ನು ನಡೆಸಿದ್ದೆ. ನಿಕಟ ಒಡನಾಟ ಮುಂದುವರಿದಿತ್ತು. ಅವರ ಅಭಿಪ್ರಾಯಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ನೋವು ತಂದಿದೆ. ಅವರ ಕುಟುಂಬಕ್ಕೆ ಮತ್ತು ಲಕ್ಷಾಂತರ ಬೆಂಬಲಿಗರಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.

ಅಮಿತ್ ಶಾ ಗುರುಗ್ರಾಮ್ ಗೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುಗ್ರಾಮ್ ನ ಮೇದಾಂತ್ ಆಸ್ಪತ್ರೆಗೆ ತೆರಳಿ ಮೃತ ಹಿರಿಯ ರಾಜಕಾರಣಿ ಮುಲಾಯಂ ಯಾದವ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com