ಮುಲಾಯಂ ಸಿಂಗ್ ಯಾದವ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಗಣ್ಯರಿಂದ ಅಂತಿಮ ದರ್ಶನ

ಗುರುಗ್ರಾಮ್ ನ ಮೆದಾಂತ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಾದ ಉತ್ತರ ಪ್ರದೇಶದ ಸೈಫೈನಲ್ಲಿ ನಡೆಯಲಿದೆ.
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್
Updated on

ಲಖನೌ: ಗುರುಗ್ರಾಮ್ ನ ಮೆದಾಂತ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಾದ ಉತ್ತರ ಪ್ರದೇಶದ ಸೈಫೈನಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತಿತರರು ಪಾಲ್ಗೊಳ್ಳುವ ಸಾಧ್ಯತೆಯಿದೆ.

ಸೈಫೈನಲ್ಲಿ ಮುಲಾಯಂ ಸಿಂಗ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,  ಪಿಎಸ್ ಪಿ ಮುಖ್ಯಸ್ಥ ಶಿವಪಾಲ್ ಸಿಂಗ್ ಯಾದವ್, ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್, ಬಿಜೆಪಿ ಸಂಸದ ರಿಟಾ ಬಹುಗುಣಜೋಶಿ ಮತ್ತಿತರ ನಾಯಕರು ಅಂತಿಮ ದರ್ಶನ ಪಡೆದರು.

82 ವರ್ಷದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಅಂತಿಮ ದರ್ಶನ ಪಡೆಯಲು  ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸೈಕಲ್, ಮೊಬೈಕ್, ಕಾರು ಮತ್ತಿತರ ವಾಹನಗಳಲ್ಲಿ ಸೈಫ್ ನತ್ತ ಧಾವಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com