ಉಜ್ಜಯಿನಿ: ಮಹಾಕಾಲ ಕಾರಿಡಾರ್ ನ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ

ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ 856 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಹಾಕಾಲ ಕಾರಿಡಾರ್ ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.
ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ
ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ

ಭೋಪಾಲ್: ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ 856 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಹಾಕಾಲ ಕಾರಿಡಾರ್ ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.

ಮಧ್ಯ ಪ್ರದೇಶ ರಾಜಧಾನಿ ಭೋಪಾಲ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಉಜ್ಜಯಿನಿಯಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಂಜೆ 7 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಅವರು ಮಹಾಕಾಲ ಕಾರಿಡಾರ್ ನ ಮೊದಲ ಹಂತ - 'ಮಹಾಕಲ್ ಲೋಕ' ಅನ್ನು ಉದ್ಘಾಟಿಸಿದರು.

ಮಹಾಕಾಲ್ ಲೋಕ ಕಾರಿಡಾರ್‌ನ ಮೊದಲ ಹಂತದ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಎರಡನೇ ಹಂತದ ಮೆಗಾ ಕಾರಿಡಾರ್ ಅಭಿವೃದ್ಧಿ ಯೋಜನೆಯ ಭಾಗವಾಗಿ ಮಹಾಕಾಳೇಶ್ವರ ದೇವಸ್ಥಾನದ ಬಳಿ ಇರುವ ಪಾರಂಪರಿಕ ಕಟ್ಟಡದಲ್ಲಿ ಪಂಚತಾರಾ ಹೋಟೆಲ್‌ನಂತಹ ಸೌಲಭ್ಯದೊಂದಿಗೆ 40 ಕೊಠಡಿಗಳ ಧರ್ಮಶಾಲಾವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಜ್ಜಯಿನಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಮಹಾಕಾಳೇಶ್ವರ ದರ್ಶನ ಪಡೆಯಲು 856 ಕೋಟಿ ರೂಪಾಯಿ ವೆಚ್ಚದಲ್ಲಿ 'ಮಹಾಕಲ್ ಲೋಕ' ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಕಾರಿಡಾರ್‌ನಲ್ಲಿ 190ಕ್ಕೂ ಹೆಚ್ಚು ಶಿವನ ಪ್ರತಿಮೆಗಳನ್ನು ಕೆತ್ತಲಾಗಿದೆ. 12 ಮೀ. ಅಗಲದ ಪ್ರದೇಶವನ್ನು ಪಾದಚಾರಿಗಳ ಓಡಾಟಕ್ಕೆ ಮೀಸಲಿಡಲಾಗಿದೆ. ಆ್ಯಂಬುಲೆನ್ಸ್‌ ಮತ್ತು ಅಗ್ನಿಶಾಮಕ ವಾಹನಗಳು ಚಲಿಸುವುದಕ್ಕೂ ವ್ಯವಸ್ಥೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com