ಅನಿಲ್ ದೇಶಮುಖ್‌ ಜಾಮೀನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲ(ಇಡಿ)ಯ ಸಲ್ಲಿಸಿದ್ದ ಮೇಲ್ಮನಯನ್ನು ಸುಪ್ರೀಂ ಕೋರ್ಟ್...
ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್
ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲ(ಇಡಿ)ಯ ಸಲ್ಲಿಸಿದ್ದ ಮೇಲ್ಮನಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

“ಹೈಕೋರ್ಟ್‌ನ ದೋಷಾರೋಪಣೆಯ ಆದೇಶದಲ್ಲಿ ಪ್ರತಿವಾದಿಗೆ ಜಾಮೀನು ನೀಡಬಹುದೇ ಎಂಬುದನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠ, ಆರೋಪಿಯ ವಿಚಾರಣೆ  ಅಥವಾ ಇತರ ಪ್ರಕ್ರಿಯೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಜಾಮೀನು ಆದೇಶದ ವಿರುದ್ಧ ಸಲ್ಲಿಸಿದ್ದ ವಿಶೇಷ ಅರ್ಜಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.

ಹೈಕೋರ್ಟ್‌ ಆದೇಶದ ವಿರುದ್ಧ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಳ ನ್ಯಾಯಾಲಯವು "ಮಿನಿ-ಟ್ರಯಲ್" ನಡೆಸಿದೆ ಮತ್ತು ಸಾಕ್ಷ್ಯವನ್ನು ಸಂಪೂರ್ಣವಾಗಿ ಪರಿಗಣಿಸಿಲ್ಲ ಎಂದು ಪ್ರತಿಪಾದಿಸಿದರು. 

ಬಾರ್ ಹೋಟೆಲ್‌ಗಳಿಂದ ಲಂಚದ ರೂಪದಲ್ಲಿ ಸಂಗ್ರಹಿಸಿದ ಹಣವು ಅಂತಿಮವಾಗಿ ದೇಶಮುಖ್ ಅಧ್ಯಕ್ಷರಾಗಿದ್ದ ಸಂಸ್ಥೆಗೆ ಹೋಗಿದೆ ಮತ್ತು ಶೆಲ್ ಕಂಪನಿಗಳ ಮೂಲಕ ವಹಿವಾಟು ನಡೆದಿದೆ ಎಂಬುದು ಅವರ ವಾದವಾಗಿತ್ತು. ಈ ವಹಿವಾಟುಗಳನ್ನು ದೃಢೀಕರಿಸುವ ಸಾಕ್ಷಿಗಳ ಹೇಳಿಕೆಗಳಿವೆ ಎಂದು ಮೆಹ್ತಾ ವಾದಿಸಿದರು.

ದೇಶಮುಖ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತರ ಸಹ ಆರೋಪಿಗಳು ಜಾಮೀನಿನ ಮೇಲೆ ಇದ್ದಾರೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ವಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com