ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವ್ಯಕ್ತಿಚಿತ್ರ

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್  ಅವರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಶಿಫಾರಸ್ಸು ಮಾಡಿದ್ದು, ಚಂದ್ರಚೂಡ್ ಅವರ ವ್ಯಕ್ತಿಚಿತ್ರ ಇಲ್ಲಿದೆ.
ನ್ಯಾಯಮೂರ್ತಿ ಡಿವೈ ಚಂದ್ರಚೂಡ್
ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್  ಅವರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಶಿಫಾರಸ್ಸು ಮಾಡಿದ್ದು, ಚಂದ್ರಚೂಡ್ ಅವರ ವ್ಯಕ್ತಿಚಿತ್ರ ಇಲ್ಲಿದೆ.

ಪೂರ್ಣ ಹೆಸರು ಧನಂಜಯ ವೈ ಚಂದ್ರಚೂಡ್..  ನವದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜ್‍ನಿಂದ ಅರ್ಥಶಾಸ್ತ್ರದಲ್ಲಿ ಬಿ.ಎ. ಆನರ್ಸ್, ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‍ನಿಂದ ಎಲ್.ಎಲ್.ಬಿ. ಪದವಿ ಮತ್ತು ಯು.ಎಸ್.ಎ.ಯ ಹಾರ್ವರ್ಡ್ ಲಾ ಸ್ಕೂಲ್‍ನಿಂದ ಎಲ್.ಎಲ್.ಎಂ. ಮತ್ತು ಎಸ್.ಜೆ.ಡಿ. ಪದವಿ ಪಡೆದಿದ್ದಾರೆ. ಅವರು ಸುದೀರ್ಘ ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ವೈ ವಿ ಚಂದ್ರಚೂಡ್ ಅವರ ಪುತ್ರರಾಗಿದ್ದು, ನವೆಂಬರ್ 11 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರ ತಾಯಿ ಶಾಸ್ತ್ರೀಯ ಸಂಗೀತಗಾರರಾಗಿದ್ದರು. ಅವರು ಆರ್ಥಿಕ ಮತ್ತು ಗಣಿತಶಾಸ್ತ್ರದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದರು ಮತ್ತು ನಂತರ 1992 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಕಾನೂನು ವಿಭಾಗದಿಂದ ಕಾನೂನು ಪದವಿಯನ್ನು ಪಡೆದರು ಮತ್ತು ನಂತರ ಹಾರ್ವರ್ಡ್ ಕಾನೂನು ಶಾಲೆಯಿಂದ ಕಾನೂನುಗಳ ಸ್ನಾತಕೋತ್ತರ ಪದವಿಯನ್ನು ಪಡೆದರು.

ಅವರು ಮಾರ್ಚ್ 29 2000 ರಿಂದ ಅಲಹಾಬಾದ್ ಹೈಕೋರ್ಟ್‌ನ ಸಿಜೆ ಆಗಿ ನೇಮಕಗೊಳ್ಳುವವರೆಗೆ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾದರು. ಮಾರ್ಚ್ 13 2016 ರಂದು ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಬಾರ್ ಕೌನ್ಸಿಲ್ ಆಫ್ ಮಹಾರಾಷ್ಟ್ರದಲ್ಲಿ ನೋಂದಣಿಯಾಗಿರುವ ಚಂದ್ರಚೂಡ್ ಅವರು, ಮುಖ್ಯವಾಗಿ ಬಾಂಬೆ ಉಚ್ಛ ನ್ಯಾಯಾಲಯದಲ್ಲಿ ಮತ್ತು ಭಾರತದ ಸವೋಚ್ಛ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 1998ರಲ್ಲಿ ಭಾರತದ ಹಿರಿಯ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನಿಯೋಜನೆಯಾಗಿದ್ದರು.

ಮಾರ್ಚ್ 29, 2000 ರಂದು ಬಾಂಬೆ ಉ.ನ್ಯಾಯಾಲಯದ ಪೀಠಕ್ಕೆ ಬಡ್ತಿ ಮಹಾರಾಷ್ಟ್ರ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿದ್ದರು. ಅಕ್ಟೋಬರ್ 31, 2013 ರಿಂದ ಅಲಹಾಬಾದ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.  ಮೇ 13, 2016 ರಂದು ಭಾರತದ ಸವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಬಡ್ತಿ ಪಡೆದ ಅವರು, ಮುಂಬೈ ವಿಶ್ವವಿದ್ಯಾಲಯದಲ್ಲಿ ತುಲನಾತ್ಮಕ ಸಾಂವಿಧಾನಿಕ ಕಾನೂನು ವಿಷಯಕ್ಕೆ ಸಂರ್ದಶನ ಪ್ರಾಧ್ಯಾಪಕ. ಯು.ಎಸ್.ಎ.ನ ಓಕ್ಲಹೋಮಾ ಯೂನಿವರ್ಸಿಟಿ ಸ್ಕೂಲ್ ಆಫ್ ಲಾನಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದರು.

ಆಸ್ಟ್ರೇಲಿಯಾದ ರಾಷ್ಟ್ರೀಯ ವಿಶ್ವವಿದ್ಯಾಲಯ, ಹಾರ್ವರ್ಡ್ ಲಾ ಸ್ಕೂಲ್, ಯೇಲ್ ಲಾ ಸ್ಕೂಲ್ ಮತ್ತು ದಕ್ಷಿಣ ಆಫ್ರಿಕಾದ ವಿಟ್‍ವಾಟರಸ್‍ರ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಿಕೆ; ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಉನ್ನತ ಆಯೋಗ, ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ, ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ, ವಿಶ್ವ ಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ವಿಶ್ವಸಂಸ್ಥೆಯ ಸಂಸ್ಥೆಗಳು ಆಯೋಜಿಸಿರುವ ಸಮ್ಮೇಳನಗಳಲ್ಲಿ ಭಾಷಣಕಾರರಾಗಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com