ಬಿಹಾರದಲ್ಲಿ ಪೊಲೀಸ್ ಬಸ್ ಡಿಕ್ಕಿಯಿಂದ ಬೈಕ್ ಪೆಟ್ರೋಲ್ ಟ್ಯಾಂಕ್ ಸ್ಫೋಟ: ಮೂವರ ದುರ್ಮರಣ!

ಪೊಲೀಸ್ ಬಸ್‌ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಬೈಕ್ ನ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೊಲೀಸ್ ಬಸ್
ಪೊಲೀಸ್ ಬಸ್

ಸರನ್: ಪೊಲೀಸ್ ಬಸ್‌ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಬೈಕ್ ನ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಸರನ್ ಜಿಲ್ಲೆಯ ರೆವೆಲ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-531 ರ ಡಿಯೋರಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ವೇಳೆ ಬೈಕ್ ಬಸ್‌ನ ಕೆಳಗೆ ಸಿಲುಕಿಕೊಂಡಿದ್ದು ಒಂದೆರೆಡು ಮೀಟರ್ ದೂರಕ್ಕೆ ಎಳೆದುಕೊಂಡು ಹೇಗಿದೆ. ವೇಳೆ ಪೆಟ್ರೋಲ್ ಬ್ಯಾಂಕ್ ಸ್ಫೋಟಕೊಂಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತರನ್ನು ಪಂಚಭಿಂಡಾ ಗ್ರಾಮದ ನಿವಾಸಿಗಳಾದ 22 ವರ್ಷದ ಕುಂದನ್ ಮಾಂಝಿ, 25 ವರ್ಷದ ಬುಲ್ಬುಲ್ ಮಾಂಝಿ ಮತ್ತು 24 ವರ್ಷದ ಕಿಶೋರ್ ಮಾಂಝಿ ಎಂದು ಗುರುತಿಸಲಾಗಿದೆ. ಇನ್ನು ಇವರೆಲ್ಲಾ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಿದ್ದ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದ್ದ ಸಿತಾಬ್ ಡಿಯಾರಾದಿಂದ ಪೊಲೀಸ್ ಸಿಬ್ಬಂದಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಘಟನೆಯಲ್ಲಿ ಯಾವುದೇ ಪೊಲೀಸರಿಗೆ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com