ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿದ್ದು ವದಂತಿಯಷ್ಟೇ; ಕೆಲವರಿಂದ ಪಕ್ಷಕ್ಕೆ ಮಸಿ ಬಳಿಯುವ ಯತ್ನ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನನ್ನ ಹೆಸರನ್ನೂ ಎಂದಿಗೂ ಮುಂದಿಟ್ಟಿರಲಿಲ್ಲ, ಈ ಕುರಿತಾಗಿ ವದಂತಿ ಹರಡಿದೆ ಅಷ್ಟೇ ಎಂದು ಖರ್ಗೆ ಸ್ಪಷ್ಟನೆ ನೀಡಿದ್ಧಾರೆ. ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಮತ್ತು ನನ್ನ ಮಾನಹಾನಿಗಾಗಿ ಯಾರೋ ಈ ವದಂತಿ ಹಬ್ಬಿಸಿದ್ದಾರೆ.
ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜನ ಖರ್ಗೆ
ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜನ ಖರ್ಗೆ

ಲಕ್ನೋ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಮಾಡುವಂತೆ ತಮ್ಮ ಹೆಸರನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂದಿಟ್ಟಿರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ತಮಗೆ ಬೆಂಬಲಿಸುವುದಾಗಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾದ ಎಲ್ಲಾ ವದಂತಿಗಳಿಗೂ ಖರ್ಗೆ ತೆರೆ ಎಳೆದಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನನ್ನ ಹೆಸರನ್ನೂ ಎಂದಿಗೂ ಮುಂದಿಟ್ಟಿರಲಿಲ್ಲ, ಈ ಕುರಿತಾಗಿ ವದಂತಿ ಹರಡಿದೆ ಅಷ್ಟೇ ಎಂದು ಖರ್ಗೆ ಸ್ಪಷ್ಟನೆ ನೀಡಿದ್ಧಾರೆ. ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಮತ್ತು ನನ್ನ ಮಾನಹಾನಿಗಾಗಿ ಯಾರೋ ಈ ವದಂತಿ ಹಬ್ಬಿಸಿದ್ದಾರೆ, ಅವರು ಪಕ್ಷದ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ಯಾವುದೇ ಅಭ್ಯರ್ಥಿಯ ಬೆಂಬಲಕ್ಕೆ ಬರುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಖರ್ಗೆ ಹೇಳಿದರು.

ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಹುದ್ದೆಗೆ ನನ್ನ ಹೆಸರನ್ನು ಮುಂದಿಟ್ಟಿದ್ದಾರೆ ಎಂದು ನಾನೂ ಕೂಡಾ ಎಲ್ಲೂ ಹೇಳಿಲ್ಲ, ಈ ಕುರಿತಾಗಿ ಹರಡಿರುವುದೆಲ್ಲವೂ ವದಂತಿ ಎಂದು ಖರ್ಗೆ ಹೇಳಿದ್ದಾರೆ. ಗಾಂಧಿ ಪರಿವಾರದ ಯಾವುದೇ ಸದಸ್ಯ ಅಧ್ಯಕ್ಷೀಯ ಚುನಾವಣೆಗೆ ನಿಲ್ಲೋದಿಲ್ಲ ಹಾಗೂ ಅಧ್ಯಕ್ಷೀಯ ಚುನಾವಣೆಯ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡೋದಿಲ್ಲ ಎಂದು ತಿಳಿಸಿದ್ದಾರೆ ಎಂದು ಖರ್ಗೆ ಹೇಳಿದರು.

ಚುನಾವಣೆಯ ಈ ಹಂತದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಪರಿವಾರದ ಶ್ರೀರಕ್ಷೆ ಇದೆ ಎಂಬ ಸುದ್ದಿ ಹರಡಿದೆ. ಇದನ್ನು ಖಂಡಿಸಿರುವ ಮಲ್ಲಿಕಾರ್ಜುನ ಖರ್ಗೆ, ಈ ರೀತಿಯ ವದಂತಿ ಹರಡಿ ಕಾಂಗ್ರೆಸ್ ಪಕ್ಷಕ್ಕೆ, ನನಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಸೋನಿಯಾ ಗಾಂಧಿ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದಿದ್ದರು, ಅಷ್ಟೇ ಅಲ್ಲ, ಯಾವುದೇ ಅಭ್ಯರ್ಥಿಯನ್ನ ಬೆಂಬಲಿಸೋದಿಲ್ಲ ಅಂತಾನೂ ಹೇಳಿದ್ದರು ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೇಶಾದ್ಯಂತ ಒಟ್ಟು 9,300 ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪ್ರತಿನಿಧಿಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಹೆಚ್ಚಿನ ವೋಟು ಪಡೆದ ಅಭ್ಯರ್ಥಿ ಗೆಲುವು ಸಾಧಿಸಿ ಅಧ್ಯಕ್ಷರಾಗಲಿದ್ದಾರೆ.

ನಾನು ನನ್ನ ಗೆಲುವಿನ ಬಗ್ಗೆ ಎದುರು ನೋಡುತ್ತಿಲ್ಲ. ನನಗೆ ಚುನಾವಣೆ ಸ್ಪರ್ಧಿಸುವಂತೆ ಪ್ರೇರೇಪಿಸಿದ ಪಕ್ಷದ ಸದಸ್ಯರ ಮೇಲೆ ನನ್ನ ಸೋಲು ಮತ್ತು ಗೆಲುವಿನ ಜವಾಬ್ದಾರಿ ಹಾಕಿದ್ದೇನೆ," ಎಂದರು. ಇದೇ ಭಾನುವಾರ ಮಾತನಾಡಿದ್ದ ಮಲ್ಲಿಕಾರ್ಜುನ್‌ ಖರ್ಗೆ ದೇಶದ ಪರಿಸ್ಥಿತಿ ಹದಗೆಟ್ಟಿದೆ ಮತ್ತು ದೇಶದ ಒಳಿತಿಗಾಗಿ ಹೋರಾಡಲು ತಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com