ಚೆನ್ನೈ: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ ಯುವತಿಯ ಹತ್ಯೆ, ಆರೋಪಿಗಾಗಿ ಪೊಲೀಸರ ಹುಡುಕಾಟ

ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ 20 ವರ್ಷದ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಸೆಂಟ್ ಥೋಮಸ್ ಮೌಂಟ್ ರೈಲ್ವೆ ನಿಲ್ದಾಣದಲ್ಲಿ ಇಂದು ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ 20 ವರ್ಷದ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಸೆಂಟ್ ಥೋಮಸ್ ಮೌಂಟ್ ರೈಲ್ವೆ ನಿಲ್ದಾಣದಲ್ಲಿ ಇಂದು ನಡೆದಿದೆ.

ಸುಮಾರು 1 ಗಂಟೆ ಸುಮಾರಿನಲ್ಲಿ  ಈ ಘಟನೆ ನಡೆದಿದ್ದು, ಮಹಿಳೆಯೊಂದಿಗೆ ಜಗಳವಾಡುತ್ತಿದ್ದ ವ್ಯಕ್ತಿ, ಸಬ್ ಹರ್ಬನ್ ರೈಲು ಬರುತ್ತಿದ್ದಂತೆ ಫ್ಲಾಟ್ ಫಾರಂ ನಿಂದ ರೈಲ್ವೆ ಹಳಿಗೆ ತಳ್ಳಿ ಹತ್ಯೆ ಮಾಡಿದ್ದು, ಬಳಿಕ ಅಲ್ಲಿಂದ ಆತ ಕಾಲ್ಕಿತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದರಿಂದಾಗಿ ಪ್ರಯಾಣಿಕರು ಆತಂಕಗೊಂಡಿದ್ದರು ಯುವತಿ ಸ್ಥಳದಲ್ಲಿಯೇ ಮೃತಪಟ್ಟರೆ, ಯುವಕ ಅಲ್ಲಿಂದ ಪರಾರಿಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. 

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆಕೆಯ ತಾಯಿ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ತಂದೆ ಸರ್ಕಾರಿ ಕಂಪನಿಯೊಂದರಲ್ಲಿ ನೌಕರರಾಗಿದ್ದಾರೆ. ಆರೋಪಿ ಹುಡುಕಾಟಕ್ಕಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com