ಕಾಶ್ಮೀರ: 36 ಪೊಲೀಸ್ ಸಿಬ್ಬಂದಿಗೆ ಅವಧಿಪೂರ್ವ ನಿವೃತ್ತಿಗೆ ಆದೇಶ

ಭ್ರಷ್ಟಾಚಾರ, ಅಸಮರ್ಪಕ ಕಾರ್ಯನಿರ್ವಹಣೆ ಮತ್ತು ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ 36 ಪೊಲೀಸ್ ಸಿಬ್ಬಂದಿಗೆ ಅವಧಿಪೂರ್ವ ನಿವೃತ್ತಿ ನೀಡಿ ಗುರುವಾರ ಆದೇಶ ಹೊರಡಿಸಿದೆ.
ಪೊಲೀಸ್ (ಸಾಂಕೇತಿಕ ಚಿತ್ರ)
ಪೊಲೀಸ್ (ಸಾಂಕೇತಿಕ ಚಿತ್ರ)

ಶ್ರೀನಗರ: ಭ್ರಷ್ಟಾಚಾರ, ಅಸಮರ್ಪಕ ಕಾರ್ಯನಿರ್ವಹಣೆ ಮತ್ತು ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ 36 ಪೊಲೀಸ್ ಸಿಬ್ಬಂದಿಗೆ ಅವಧಿಪೂರ್ವ ನಿವೃತ್ತಿ ನೀಡಿ ಗುರುವಾರ ಆದೇಶ ಹೊರಡಿಸಿದೆ.

"ಪೊಲೀಸ್ ಇಲಾಖೆಯನ್ನು ಹೆಚ್ಚು ದಕ್ಷ ಮತ್ತು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿ, ಭ್ರಷ್ಟಾಚಾರ ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಂದು 36 ಪೊಲೀಸ್ ಸಿಬ್ಬಂದಿಗೆ ಅವಧಿಗೆ ಮುನ್ನ ನಿವೃತ್ತಿ ನೀಡಿ ಸರ್ಕಾರ ಆದೇಶಿಸಿದೆ" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಈ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸೇವೆಗಳಿಗೆ ಹೊಂದಿಕೆಯಾಗದ ರೀತಿಯಲ್ಲಿ ಮತ್ತು ಸ್ಥಾಪಿತ ನೀತಿ ಸಂಹಿತೆಯನ್ನು ಉಲ್ಲಂಘಿಸುವ ರೀತಿಯಲ್ಲಿ ನಿರ್ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

"ಜಮ್ಮು ಮತ್ತು ಕಾಶ್ಮೀರ ಸಿಎಸ್ಆರ್ ಗಳ ಆರ್ಟಿಕಲ್ 226(2) ರ ಪ್ರಕಾರ ವಯಸ್ಸು/ಸೇವಾ ಅವಧಿಯ ಮಾನದಂಡಗಳನ್ನು ದಾಟಿದ ಅಧಿಕಾರಿಗಳ ದಾಖಲೆಗಳ ಪರಿಶೀಲನೆಯ ನಿಯಮಿತ ಪ್ರಕ್ರಿಯೆಯ ಭಾಗವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

"ಈ ನೌಕರರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ. ಸಾಕಷ್ಟು ಅವಧಿಗೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಇಲಾಖಾ ವಿಚಾರಣೆಗಳಲ್ಲಿ ದಂಡನೆಗೆ ಒಳಗಾಗಿದ್ದಾರೆ ಮತ್ತು ಅವರಲ್ಲಿ ಕೆಲವರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ" ಎಂದು ವಕ್ತಾರರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com